ಸುದ್ದಿ ಸಂಕ್ಷಿಪ್ತ
ಕಾರ್ಯಾಗಾರ
ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ ವತಿಯಿಂದ ಡಿ.20 ರ ಬೆಳಿಗ್ಗೆ 10 ಗಂಟೆಗೆ ವಿಭಾಗೀಯ ಪತ್ರಾಗಾರ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಮತ್ತು ತಾಲೂಕು ಕಚೇರಿಗಳ ದಾಖಲೆ ಕೊಠಡಿಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿ ಸಿಬ್ಬಂದಿಗಳಿಗೆ ‘ದಾಖಲೆಗಳ ನಿರ್ವಹಣೆ’ ಬಗ್ಗೆ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.
ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆಯ ನಿರ್ದೇಶಕ ಕೆ.ಎ.ದಯಾನಂದ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಇಲಾಖೆಯ ಉಪನಿರ್ದೇಶಕಿ ಡಾ.ಎಸ್.ಅಂಬುಜಾಕ್ಷಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ.