ಸುದ್ದಿ ಸಂಕ್ಷಿಪ್ತ

ಮಂಡ್ಯ: ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಮಂಡ್ಯ (ಆ.7): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೋಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ.

ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ರೂ.10,000/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು. ಅರ್ಜಿಗಳನ್ನು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:08232-221315/227336 ಅನ್ನು ಸಂಪರ್ಕಿಸಬಹುದು. (ಎನ್.ಬಿ)

Leave a Reply

comments

Related Articles

error: