ಕರ್ನಾಟಕ

ಆಗಸ್ಟ್ 7-28 : ಮಂಡ್ಯ ಜಿಲ್ಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದಿಂದ ದೂರು ಸ್ವೀಕಾರ

ಮಂಡ್ಯ (ಆ.7): ಮಂಡ್ಯ ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಚಾರ ಅಥವಾ ಸರ್ಕಾರಿ ಅಧಿಕಾರಿಗಳಿಂದ ಲಂಚ ಬೇಡಿಕೆ ಹಾಗೂ ಕಿರುಕುಳ, ಅಕ್ರಮ ಆಸ್ತಿ ಸಂಪಾದನೆಗೆ ಸಂಬಂಧಿಸಿದಂತೆ ದೂರುಗಳನ್ನು ಆಗಸ್ಟ್ 7 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರಗೆ ಮಳವಳ್ಳಿ ಸರ್ಕಾರಿ ಪ್ರವಾಸಿ ಮಂದಿರದಲ್ಲಿ, ಆಗಸ್ಟ್ 9 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರಗೆ ನಾಗಮಂಗಲ ಪ್ರವಾಸಿ ಮಂದಿರದಲ್ಲಿ ಸ್ವೀಕರಿಸಲಾಗುವುದು.

ಆಗಸ್ಟ್ 14 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರಗೆ ಪಾಂಡವಪುರ ತಾಲ್ಲೂಕು ಪಂಚಾಯಿತಿ ಕಛೇರಿ, ಆಗಸ್ಟ್ 18 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರಗೆ ಮಂಡ್ಯ ಎಸಿಬಿ ಕಛೇರಿಯಲ್ಲಿ, ಆಗಸ್ಟ್ 21 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರಗೆ ಮದ್ದೂರು ಪ್ರವಾಸಿ ಮಂದಿರದಲ್ಲಿ, ಆಗಸ್ಟ್ 25 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರಗೆ ಕೆ.ಆರ್.ಪೇಟೆ ಪ್ರವಾಸಿ ಮಂದಿರದಲ್ಲಿ, ಆಗಸ್ಟ್ 28 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರಗೆ ಶ್ರೀರಂಗಪಟ್ಟಣ ತಾಲ್ಲೂಕು ಕಛೇರಿಯಲ್ಲಿ ಮಂಡ್ಯ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ವತಿಯಿಂದ ಸ್ವೀಕರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ದೂರುಗಳಿದ್ದಲ್ಲಿ ದೂವಾಣಿ ಸಂಖ್ಯೆ 08232-221230 ಮತ್ತು ಮೊಬೈಲ್ ಸಂಖ್ಯೆ 9480806279, 9480806224 ಗಳಿಗೆ ಸಂಪರ್ಕಿಸುವಂತೆ ಮಂಡ್ಯ ಭ್ರಷ್ಠಾಚಾರ ನಿಗ್ರಹ ದಳ ಆರಕ್ಷಕ ನಿರೀಕ್ಷಕರು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: