ಕರ್ನಾಟಕ

ಸೀತಾಪುರಕ್ಕೆ ಸಿಎಂ ಭೇಟಿ ಹಿನ್ನೆಲೆ : ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಥಳ ಪರಿಶೀಲನೆ

ಮಂಡ್ಯ (ಆ.7): ಭತ್ತದ ನಾಟಿ ಹಾಕಲು ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಪಾಂಡವಪುರ ತಾಲ್ಲೂಕಿನ ಸೀತಾಪುರದ ಹೊರವಲಯದ ಮಹದೇವಮ್ಮ ಎಂಬುವರ ಜಮೀನಿನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಈ ಹಿಂದೆ ನಾಗಮಂಗಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರೈತರೊಂದಿಗೆ ಭತ್ತ ನಾಟಿ ಮಾಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದು ಅದರಂತೆ ಆಗಸ್ಟ್ 11 ರಂದು ಸೀತಾಪುರ ಗ್ರಾಮದ ಹೊರವಲಯದಲ್ಲಿರುವ ಮಹದೇವಮ್ಮ ಅವರ 5 ಎಕರೆ ಜಮೀನಿನಲ್ಲಿ ಭತ್ತದ ನಾಟಿ ಹಾಕುವ ಮೂಲಕ ನಾಟಿಗೆ ಚಾಲನೆ ನೀಡಲ್ಲಿದ್ದಾರೆ ಎಂದು ತಿಳಿಸಿದ ಅವರು ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸಚಿವರು ತಿಳಿಸಿದರು.

ಮುಖ್ಯಮಂತ್ರಿಗಳು ಆಗಮಿಸುವ ಆ ದಿನ ಅಧಿಕಾರಿಗಳು ಸಿಡಿಎಸ್ ನಾಲೆ ಸುತ್ತಲು ಬೆಳೆದಿರುವ ಗಿಡಗಳು ತೆಗೆದು, ಸ್ವಚ್ಛಗೊಳಿಸಬೇಕು. ಸಿಡಿಎಸ್ ನಾಲೆಯ ಕಡೆಗೆ ತಡೆಗೋಡೆ ನಿರ್ಮಿಸಬೇಕು. ಗದ್ದೆ ಮಧ್ಯಭಾಗ ಮೂವರು ಮಂದಿ ನಿಲ್ಲುವ ಪುಟ್ಟ ವೇದಿಕೆ ನಿರ್ಮಾಣ ಮಾಡಲು ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ, ಜಂಟಿ ಕೃಷಿ ನಿರ್ದೇಶಕರಾದ ರಾಜಸುಲೋಚನಾ, ಪಾಂಡವಪುರ ಉಪವಿಭಾಗಧಿಕಾರಿಗಳಾದ ಯಶೋಧಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. (ಎನ್.ಬಿ)

Leave a Reply

comments

Related Articles

error: