ಸುದ್ದಿ ಸಂಕ್ಷಿಪ್ತ

ಸರ್ವಸದಸ್ಯರ ಸಾಮಾನ್ಯ ಸಭೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ

ಮಂಡ್ಯ (ಆ.7): ಜಿಲ್ಲೆಯಲ್ಲಿನ ಎಲ್ಲ ಸಹಕಾರ ಸಂಘಗಳು ಸೆ.24 ರೊಳಗೆ ಸರ್ವಸದಸ್ಯರ ಸಾಮಾನ್ಯಸಭೆ ನಡೆಸುವುದು ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959ರ ಪ್ರಕರಣ 27ರ ರೀತ್ಯಾ ಕಡ್ಡಾಯವಾಗಿದ್ದು, ಜಿಲ್ಲೆಯಲ್ಲಿನ ಸಹಕಾರ ಸಂಘಗಳ ಕಾರ್ಯದರ್ಶಿ/ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು ಸೆಪ್ಟೆಂಬರ್ 24 ರೊಳಗೆ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆಸಿ ವರದಿ ಸಲ್ಲಿಸುವಂತೆ ಶ್ರೀ ಹೆಚ್.ಪಿ.ಕುಮಾರ್, ಸಹಕಾರ ಸಂಘಗಳ ಉಪ ನಿಬಂಧಕರು, ಮಂಡ್ಯ ಜಿಲ್ಲೆ, ಮಂಡ್ಯ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. (ಎನ್.ಬಿ)

Leave a Reply

comments

Related Articles

error: