
ಮೈಸೂರು
ನೂತನ ಐಜಿಪಿ ಕೆ.ವಿ.ಶರತ್ ಚಂದ್ರ ಅಧಿಕಾರ ಸ್ವೀಕಾರ
ಮೈಸೂರು,ಆ.8:- ರಾಜ್ಯ ಸರ್ಕಾರ ಮೈಸೂರು ದಕ್ಷಿಣ ವಲಯದ ನೂತನ ಐಜಿಪಿ ಆಗಿ ಕೆ.ವಿ.ಶರತ್ ಚಂದ್ರ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು, ಇಂದು ಅಧಿಕಾರ ವಹಿಸಿಕೊಂಡರು.
ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ಹೂಗುಚ್ಛ ನೀಡುವ ಮೂಲಕ ನೂತನ ಐಜಿಪಿ ಅವರನ್ನು ಅವರ ಕಚೇರಿಯಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು. ಇದೇ ವೇಳೆ ನೂತನ ಐಜಿಪಿ ತಮ್ಮ ಕರ್ತವ್ಯಕ್ಕೆ ಹಾಜರಾದರು. ಕೆ.ವಿ.ಶರತ್ ಚಂದ್ರ ಈ ಹಿಂದೆ ಹಾಸನ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದು, ದಕ್ಷತೆಗೆ ಹೆಸರಾಗಿದ್ದರು.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಲಾಗುವುದಿಲ್ಲ. ಹೆದ್ದಾರಿಯಲ್ಲಿ ದರೋಡೆ ನಡೆಯುತ್ತಿವೆ ಎಂದು ತಿಳಿದು ಬಂದಿದ್ದು, ಅದಕ್ಕೆ ವಿಶೇಷ ತಂಡ ರಚಿಸಿ ಕಾರ್ಯಾಚರಣೆಗಿಳಿಯಲಾಗುವುದು. ಇಂದು ಮಧ್ಯಾಹ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭೆ ಕರೆದಿದ್ದೇನೆ. ಅವರ ಜೊತೆ ಚರ್ಚಿಸಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗುವುದು ಎಂದರು. (ಕೆ.ಎಸ್,ಎಸ್.ಎಚ್)