ಪ್ರಮುಖ ಸುದ್ದಿ

ಮಾಜಿ ಸಚಿವ ತಿಪ್ಪೇಸ್ವಾಮಿ ನಿಧನ

ರಾಜ್ಯ(ಬೆಂಗಳೂರು)ಆ.8:-ಮಾಜಿ ಪ್ರಧಾನಿಯಾದ ಹೆಚ್.ಡಿ.ದೇವೇಗೌಡ, ಹಾಗೂ ಮಾಜಿ ಮುಖ್ಯಮಂತ್ರಿ ಜೆ.ಹೆಚ್.ಪಟೇಲ್ ಅವರ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದ ತಿಪ್ಪೇಸ್ವಾಮಿ ಅವರು ಇಂದು ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೃತರಿಗೆ 76ವರ್ಷ ವಯಸ್ಸಾಗಿತ್ತು. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಪತ್ನಿ, ಪುತ್ರಿ, ಪುತ್ರರನ್ನು ಅಪಾರ ರಾಜಕೀಯ ಮಿತ್ರರನ್ನು ಅಗಲಿದ್ದಾರೆ. ಹೆಚ್.ಡಿ.ದೇವೇಗೌಡರ ಸರ್ಕಾರದಲ್ಲಿ ಅಬಕಾರಿ ಸಚಿವರಾಗಿಯೂ, ಜೆ.ಹೆಚ್.ಪಟೇಲ್ ಅವರ ಸರ್ಕಾರದಲ್ಲಿ ಸಣ್ಣ ನೀರಾವರಿ ಇಲಾಖೆಯ ಸಚಿವರಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ನಾಲ್ಕು ದಶಕಗಳ ರಾಜಕೀಯ ಸೇವೆಗೆ 2017ರಲ್ಲಿ ರಾಜ್ಯ ಸರ್ಕಾರ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಿದೆ. ಇವರು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಾಟಪ್ಪನಹಟ್ಟಿಯವರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: