ದೇಶಪ್ರಮುಖ ಸುದ್ದಿ

ರಾಜ್ಯಸಭೆ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ: ರಾಜ್ಯದ ಬಿ.ಕೆ.ಹರಿಪ್ರಸಾದ್ ಅಭ್ಯರ್ಥಿ

ನವದೆಹಲಿ (ಆ.8): ದೇಶದ ಸಂಸತ್ತಿನ ರಾಜ್ಯಸಭೆ ಉಪಸಭಾಪತಿ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ವಿರೋಧ ಪಕ್ಷಗಳು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ.

ಮೇಲ್ಮನೆ ಉಪಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಇಂದು ಕಡೆ ದಿನ. ಬಿಜೆಪಿ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಉದ್ದೇಶದಿಂದ ಬಿ.ಕೆ.ಹರಿಪ್ರಸಾದ್ ಅವರನ್ನು ಜಂಟಿ ಉಮೇದುವಾರರನ್ನಾಗಿಸಲು ಪ್ರತಿಪಕ್ಷಗಳು ನಿರ್ಧರಿಸಿವೆ. ಸಂಯುಕ್ತ ಜನತಾದಳದ ಹರಿವಂಶ ನಾರಾಯಣಸಿಂಗ್ ಅವರು ಈಗಾಗಲೇ ಎನ್‍ಡಿಎ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.

ಹರಿಪ್ರಸಾದ್ ಅವರು ಕರ್ನಾಟಕದಿಂದ ರಾಜ್ಯಸಭೆಯನ್ನು ಪ್ರತಿನಿಧಿಸುವ ಹಿರಿಯ ಕಾಂಗ್ರೆಸ್ ಸದಸ್ಯರು. ಹರಿಪ್ರಸಾದ್ ಅವರು ಕಣದಲ್ಲಿರುವುದರಿಂದ ನಾಳೆ ನಡೆಯಲಿರುವ ಚುನಾವಣೆ ತೀವ್ರ ಕುತೂಹಲ ಕೆರಳಿಸಿದೆ. (ಎನ್.ಬಿ)

Leave a Reply

comments

Related Articles

error: