ಪ್ರಮುಖ ಸುದ್ದಿಮೈಸೂರು

ನಾವು ಯಾವುದೇ ಶಾಸಕರನ್ನು ಖರೀದಿಸುವ ಕೆಲಸ ಮಾಡಿಲ್ಲ : ಕೆ.ಎಸ್.ಈಶ್ವರಪ್ಪ

ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಕೆ

ಮೈಸೂರು,ಆ.9:-ಇಂದು ಬೆಳ್ಳಂಬೆಳಿಗ್ಗೆ ಬೆಂಬಲಿಗರೊದಿಗೆ ಆಗಮಿಸಿದ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ರಾಜ್ಯ ಪ್ರವಾಸ ಕೈಗೊಂಡಿದ್ದು,ಒಟ್ಟು ಮೂರು ತಂಡಗಳಾಗಿ ರಾಜ್ಯ ಪ್ರವಾಸ ಮಾಡುತ್ತಿದ್ದೇವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ನನ್ನ ನೇತೃತ್ವದಲ್ಲಿ ಮೂರು ತಂಡಗಳಲ್ಲಿ  ಪ್ರವಾಸ ನಡೆಯುತ್ತಿದೆ. ನನಗೆ ಶಾಸಕ ಸಿಟಿ ರವಿ, ಲಕ್ಷಣ್ ಸವದಿ ಹಲವು ಶಾಸಕರು ಸಾಥ್ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಹಿಂದುಳಿದ ವರ್ಗಗಳಿಗೆ ಕೊಟ್ಟಿರುವ ಕೊಡುಗೆ ಜನರಿಗೆ ತಿಳಿಸಲಿದ್ದೇವೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಅಂಬೇಡ್ಕರ್ ಉದ್ದೇಶ ಈಡೇರಿಸಿರಲಿಲ್ಲ. ಆದರೆ ಪ್ರಧಾನಿ ಮೋದಿ ಆ ಕೆಲಸವನ್ನು ಮಾಡಿದ್ದಾರೆ ಎಂದರು.

ಕೈ ಶಾಸಕರನ್ನು ಸೆಳೆಯಲು ಬಿಜೆಪಿ ಯತ್ನ ಎಂದಿರುವ  ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ ನಾವು ಯಾವುದೇ ಶಾಸಕರನ್ನು ಖರೀದಿಸುವ ಕೆಲಸ ಮಾಡಿಲ್ಲ. ಕಾಂಗ್ರೆಸ್ ನವರು ಆ ಬಗ್ಗೆ ಮಾತನಾಡುತ್ತಿದ್ದಾರೆ ಎಂದರೆ, ಕಾಂಗ್ರೆಸ್ ಶಾಸಕರು ಅಷ್ಟು ದುರ್ಬಲರೇ ಎಂದು ಪ್ರಶ್ನಿಸಿದರು. ನರೇಂದ್ರ ಮೋದಿ ರಾಜ್ಯಕ್ಕೆ ಬಂದು ನಮಗೆ 104 ಶಾಸಕರನ್ನು ಗೆಲ್ಲಿಸಿ ಕೊಟ್ಟಿದ್ದಾರೆ. ಆದರೆ ತಮ್ಮದೆ ಸರ್ಕಾರ ಇದ್ದ ಕಾಂಗ್ರೆಸ್ ಸರ್ಕಾರ 78 ಸ್ಥಾನ ಗೆಲ್ಲುವ ಮೂಲಕ 38 ಸ್ಥಾನಗಳಿಸಿರುವ ಜೆಡಿಎಸ್ ಸರ್ಕಾರ ರಚಿಸಲು ಅವಕಾಶ ಕೊಟ್ಟಿದೆ. ಸಿದ್ದರಾಮಯ್ಯ ಕಾಂಗ್ರೆಸ್ ನ‌ ಕೊನೆ ಮುಖ್ಯಮಂತ್ರಿ ಎಂದು ಸಾಬೀತಾಗಿದೆ.  ಕಾಂಗ್ರೆಸ್ ಪಕ್ಷ ಮತ್ತೆ ಯಾವತ್ತೂ ಅಧಿಕಾರಕ್ಕೆ ಬರೋದಿಲ್ಲ ಎಂದು ತಿಳಿಸಿದರು.

ಈ ಸಂದರ್ಭ ರಾಜೇಂದ್ರ,ಆನೇಕಲ್ ದೊಡ್ಡಯ್ಯ,ಶಿವಕುಮಾರ್, ಜೋಗಿ ಮಂಜು,ಸುರೇಶ್ ಬಾಬು,ಬಿ.ಎಂ.ರಘು,ರಮೇಶ್ ಕುರುಬಾರಳ್ಳಿ,ಮಂಜು ಚಿತ್ರದುರ್ಗ, ಅಶೋಕ,ಜಯರಾಮ್,ರಾಜಕುಮಾರ್,ನಾಗರಾಜು ಮತ್ತಿತರರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: