ಸುದ್ದಿ ಸಂಕ್ಷಿಪ್ತ

ನೂತನ ವಿದ್ಯಾರ್ಥಿಗಳ ಸ್ವಾಗತ ನಾಳೆ

ಮೈಸೂರು,ಆ.9 : ಯುವರಾಜ ಕಾಲೇಜಿನ ನೂತನ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಮತ್ತು ಅಭಿವಿನ್ಯಾಸ ಕಾರ್ಯಕ್ರಮವನ್ನು ಮೈಸೂರು ಕುಲಪತಿ ಪ್ರೊ.ಟಿ.ಕೆ.ಉಮೇಶ್ ಅವರು ನಾಳೆ (10)ರ ಬೆಳಗ್ಗೆ 10 ಗಂಟೆಗೆ ಉದ್ಘಾಟಿಸುವರು.

ಕಾಲೇಜಿನ ಅಮೃತ ಮಹೋತ್ಸವ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕುಲಸಚಿವ ಪ್ರೊ.ಆರ್.ರಾಜಣ್ಣ, ಆಡಳಿತಾಧಿಕಾರಿಗಳು ಮತ್ತು ಪರೀಕ್ಷಾ ನಿಯಂತ್ರಣಾಧಿಕಾರಿ ಡಾ.ಹೆಚ್.ಸಿ.ದೇವರಾಜೇಗೌಡ ಉಪಸ್ಥಿತರಿರುವರು. ಪ್ರಾಂಶುಪಾಲ ಡಾ.ಎಂ.ರುದ್ರಯ್ಯ ಅಧ್ಯಕ್ಷತೆ ವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: