
ಕ್ರೀಡೆ
ಅಥ್ಲೆಟಿಕ್ಸ್ ನಲ್ಲಿ ಗಂಗೋತ್ರಿ ಪಬ್ಲಿಕ್ ಶಾಲೆಯ ಮಕ್ಕಳ ಸಾಧನೆ
ಮೈಸೂರು, ಆ.10:- ಇತ್ತೀಚೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲ್ಪಟ್ಟ ದಕ್ಷಿಣ ವಲಯದ ಕ್ರೀಡಾಕೂಟದಲ್ಲಿ ಬೋಗಾದಿ ಮುಖ್ಯ ರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಶಾಲೆಯ ಮಕ್ಕಳು ಭಾಗವಹಿಸಿದ್ದರು. ಅತ್ಯದ್ಭುತವಾದ ಪ್ರದರ್ಶನ ನೀಡಿ ಕೆಲವು ಮಕ್ಕಳು ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದು ಮುಂದಿನ ಹಂತಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ. ದರ್ಶಿನಿ ಸಿ.ಎಸ್. – ಜಾವಲಿನ್ ಥ್ರೋನಲ್ಲಿ ಪ್ರಥಮ, ಉದ್ದಜಿಗಿತದಲ್ಲಿ ಪ್ರಥಮ, ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾಳೆ. ಹರ್ಷಿತ ಯು. ಡಿಸ್ಕಸ್ ಥ್ರೋ ಹಾಗೂ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ ಸನ್ಮಿತ ಎಂ.ಎಸ್. 3000 ಮೀಟರ್ ಓಟದಲ್ಲಿ ಪ್ರಥಮ ಮತ್ತು 800 ಮೀಟರ್ನಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. ವಿಜೇತ ವಿದ್ಯಾರ್ಥಿನಿಯರನ್ನು ಶಾಲೆಯ ಸಂಯೋಜನಾಧಿಕಾರಿಯಾದ ಕಾಂತಿ ನಾಯಕ್, ಮುಖ್ಯೋಪಾಧ್ಯಾಯಿನಿಯಾದ ಝರೀನಾ ಬಾಬುಲ್, ದೈಹಿಕ ಶಿಕ್ಷಕಿಯರಾದ ಮಂಜುಳ ಮತ್ತು ರಶ್ಮಿ ಅಭಿನಂದಿಸಿದ್ದಾರೆ. (ಜಿ.ಕೆ,ಎಸ್.ಎಚ್)