ಮೈಸೂರು

‘ಬಟ್ಟೆ ಬ್ಯಾಗ್ ವಿತರಿಸಿ ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ ಸಂದೇಶದೊಂದಿಗೆ ಸಚಿವ ಸಾ.ರಾ.ಮಹೇಶ್ ಅವರ ಜನ್ಮದಿನಾಚರಣೆ

ಮೈಸೂರು,ಆ.10:-  ಪ್ರವಾಸೋದ್ಯಮ ಸಚಿವರಾದ ಸಾರಾ ಮಹೇಶ್ ಅವರ ಹುಟ್ಟುಹಬ್ಬದ ಅಂಗವಾಗಿ ಅರಿವು ಸಂಸ್ಥೆಯ ವತಿಯಿಂದ ಚಾಮುಂಡಿ ಬೆಟ್ಟದ ಪಾದದ ಬಳಿ ಮೆಟ್ಟಿಲು ಹತ್ತುವ ಪ್ರವಾಸಿಗರಿಗೆ ಭಕ್ತಾದಿಗಳಿಗೆ ಬಟ್ಟೆ ಬ್ಯಾಗ್ ವಿತರಿಸಿ ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ ಎನ್ನುವ ಸಂದೇಶದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಇದೇ ಸಂದರ್ಭದಲ್ಲಿ ಜೆಡಿಎಸ್ ನಗರ ಕಾರ್ಯಾಧ್ಯಕ್ಷ ಪ್ರಕಾಶ್ ಪ್ರಿಯದರ್ಶನ್ ಮಾತನಾಡಿ ಸಾಂಸ್ಕೃತಿಕ ರಾಜಧಾನಿ ಮೈಸೂರನ್ನು ಪಾರಂಪರಿಕವಾಗಿ ಕಾಪಾಡಬೇಕಾದರೆ ಪರಿಸರ ಸಂರಕ್ಷಣೆಯಿಂದ ಮಾತ್ರ ಸಾಧ್ಯ. ಹಸಿರು ಹೆಚ್ಚಿರುವ ಮೈಸೂರು ಭಾಗದಲ್ಲಿ ನಾಗರೀಕರು ಪ್ಲಾಸ್ಟಿಕ್ ಬಳಕೆ ನಿಷೇಧಿಸಿದರೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡಬಹುದು. ಅದಕ್ಕಾಗಿ ಇಂದು ಪ್ರವಾಸೋದ್ಯಮ ಸಚಿವರಾದ ಸಾರಾ ಮಹೇಶ್ ಅವರ ಹುಟ್ಟುಹಬ್ಬದ ಆಚರಣೆಯನ್ನು ಯಾವುದೇ ಸಮಾರಂಭದ ಮೂಲಕ ದುಂದುವೆಚ್ಚ ಮಾಡದೇ ಪರಿಸರ ಸಂರಕ್ಷಣೆಯ ಸಂದೇಶ ಸಾರಲು ಸಾರ್ವಜನಿಕರಿಗೆ  ಬಟ್ಟೆಬ್ಯಾಗ್ ವಿತರಿಸಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಅರಿವು ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ್ ಕಶ್ಯಪ್, ಮಾಜಿ ನಗರ ಪಾಲಿಕೆ ಸದಸ್ಯ ಎಂ.ಡಿ ಪಾರ್ಥಸಾರಥಿ, ಸಮಾಜಸೇವಕ ಅಜಯ್ ಶಾಸ್ತ್ರಿ, ಜೆಡಿಎಸ್ ನಗರ ಕಾರ್ಯಾಧ್ಯಕ್ಷ ಪ್ರಕಾಶ್ ಪ್ರಿಯದರ್ಶನ್, ಉಪಾಧ್ಯಕ್ಷ ಯದುನಂದನ್, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಗೌಡ, ಜೆಡಿಎಸ್ ಯುವ ಅಧ್ಯಕ್ಷ ಗಿರೀಶ್, ರಂಗನಾಥ್ ಕಶ್ಯಪ್, ತೇಜಸ್, ಅಭಿ, ಆನಂದ್, ಮಹದೇವು, ರವಿ, ಮುಂತಾದವರು ಭಾಗವಹಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: