ಪ್ರಮುಖ ಸುದ್ದಿ

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಪತಿಯೇ ಕೊಲೆ ಮಾಡಿ ಪರಾರಿ

ರಾಜ್ಯ(ಬೆಳಗಾವಿ)ಆ.11:- ಪ್ರೀತಿಸಿ ಮದುವೆಯಾಗಿದ್ದ  ಪತ್ನಿಯನ್ನು ಪತಿಯೇ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಮಲ್ಲಮ್ಮ ಬೆಳವಡೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುಮಾ(21)  ಪತಿಯಿಂದ ಕೊಲೆಯಾದ ದುರ್ದೈವಿ. ಯುವರಾಜ್ ಮತ್ತು ಸುಮಾ ಇಬ್ಬರು ಪ್ರೀತಿಸಿ ಮದುವೆಯಾಗಿದ್ದರು. ಕೌಟುಂಬಿಕ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಪತಿ ಯುವರಾಜ್, ಅತ್ತೆ  ಮಾದೇವಿ, ಮೈದುನರಾದ ವೀರಣ್ಣ , ಯಲ್ಲಪ್ಪ ಎಲ್ಲರೂ ಸೇರಿ ಸುಮಾಳನ್ನ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಕಳೆದ ಹತ್ತು ತಿಂಗಳ ಹಿಂದಷ್ಟೇ ಸುಮಾ ಯುವರಾಜ್ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಯುವರಾಜ್ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಈ ನಡುವೆಯೂ ಬೈಲಹೊಂಗಲದಲ್ಲಿ ರಿಜಿಸ್ಟರ್ ಮದುವೆಯಾಗಿದ್ದರು.

ಈ ಕುರಿತು ದೊಡವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಆರೋಪಿಗಳನ್ನು ಬಂಧಿಸುವಂತೆ ಯುವತಿ ಸಂಬಂಧಿಕರು ಆಗ್ರಹಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: