ಮೈಸೂರು

ಡಿ.27-28 : ಕೇಕ್ ಉತ್ಸವ

ಹೋಟೆಲ್ ಮಾಲೀಕರ ಸಂಘ ಹಾಗೂ ಜಿಲ್ಲಾಡಳಿತ ವತಿಯಿಂದ ಡಿ.27 ಮತ್ತು 28 ರಂದು ಪ್ರಥಮ ಬಾರಿಗೆ ‘ಕೇಕ್ ಮೇಳ-2016’ ನ್ನು  ಶ್ರೀ ನಂಜರಾಜ ಬಹದ್ದೂರ್ ಛತ್ರದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಕೆ.ರಾಮೇಶ್ವರ್ ತಿಳಿಸಿದರು.

ಮೈಸೂರಿನ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ರಾಮೇಶ್ವರ್, ಅಂದು ಕೇಕ್ ಬೇಕರಿ ಉತ್ಪನ್ನಗಳ ಪ್ರದರ್ಶನ, ಮಾರಾಟ , ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಅಲ್ಲದೇ ಪ್ರವಾಸೋದ್ಯಮವನ್ನು ಉತ್ತೇಜಿಸಲು 2017 ರ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕ್ಯಾಲೆಂಡರ್ ಗಳಲ್ಲಿ ಜನವರಿ 2017 ರಿಂದ ಡಿಸೆಂಬರ್ ವರೆಗೂ ಮೈಸೂರು ಹಾಗೂ ಸುತ್ತಮುತ್ತಲಿನ ಪ್ರವಾಸಿ ತಾಣಗಳನ್ನು ಪ್ರತಿ ತಿಂಗಳೂ ಪ್ರತ್ಯೇಕವಾಗಿ ಪ್ರಕಟಿಸಲಾಗಿದೆ ಎಂದು ಹೇಳಿದರು.

ನಂತರ 2017 ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ರವೀಂದ್ರಭಟ್, ಸುರೇಶ್, ಭಾಸ್ಕರ್, ಕಿರಣ್ ಮತ್ತಿತರರು ಹಾಜರಿದ್ದರು.

Leave a Reply

comments

Related Articles

error: