ಕರ್ನಾಟಕ

ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಹಣ ದೋಚುತ್ತಿದ್ದ ಇಬ್ಬರ ಬಂಧನ

ಬೆಂಗಳೂರು,ಆ.11-ಭಾರತೀಯ ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಲಕ್ಷಾಂತರ ರೂ. ಪಡೆದು ನಕಲಿ ನೇಮಕಾತಿ ಪತ್ರ ನೀಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಬೆಂಗಳೂರು ಪೊಲೀಸರು ಉಳಿದವರಿಗಾಗಿ ಶೋಧ ಕಾರ್ಯ ನಡೆಸುತ್ತಿದೆ.

ಕೃಷ್ಣರಾಜನ್‌, ಸುಜಾತ ಬಂಧಿತ ಆರೋಪಿಗಳು. ಸೇನೆಯಲ್ಲಿ ಉದ್ಯೋಗ ಕೊಡಿಸುತ್ತೇವೆ ಎಂದು ಹೇಳಿ ವಂಚನೆ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿ ಅಭ್ಯರ್ಥಿಯಿಂದ ಎರಡು ಲಕ್ಷ ಬೇಡಿಕೆ ಇಡುತ್ತಿದ್ದ ವಂಚಕರು ಮೊದಲ ಹಂತದಲ್ಲಿ 40 ಸಾವಿರ ರೂ. ಪಡೆದು ನಕಲಿ ನೇಮಕಾತಿ ಪತ್ರ ನೀಡುತ್ತಿದ್ದರು.

ಆರೋಪಿಗಳಾದ ಕೃಷ್ಣರಾಜನ್‌, ಜ್ಯೋತಿಲಕ್ಷ್ಮಿ, ಸುಜಾತ, ಮೆಹಬೂಬ್ಬಾಷ ವಿರುದ್ಧ ಪ್ರಕರಣ ದಾಖಲಾಗಿತ್ತು. ಊಟಿ ಇನ್ನಿತರೆ ಪ್ರದೇಶಗಳಿಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ನಡೆಸುತ್ತಿದ್ದರು ಎಂದು ದೀಪು ಶಂಕರ ಅವರು ಹೆಬ್ಬಾಳ ಪೊಲೀಸರಿಗೆ ದೂರು ನೀಡಿದ್ದರು.

ವಂಚಕರು ಹಲವರಿಗೆ ರೀತಿ ಮೋಸ ಮಾಡಿರುವುದಾಗಿ ಅವರು ತಿಳಿಸಿದ್ದರು. ಸುಜಾತ ಎಂಬಾಕೆ ಹಿಂದೆಯೂ ಕೆಲಸ ಕೊಡಿಸುವುದಾಗಿ ವಂಚಿಸಿರುವ ಸಂಬಂಧ ಹೆಬ್ಬಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಇಬ್ಬರು ವಂಚಕರನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. (ಎಂ.ಎನ್)

Leave a Reply

comments

Related Articles

error: