ಪ್ರಮುಖ ಸುದ್ದಿ

122 ಕೋಟಿ ರೂ‌.ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ನ್ಯಾಯಾಲಯಗಳ ಸಂಕೀರ್ಣ ಉದ್ಘಾಟನೆ

ರಾಜ್ಯ(ಹುಬ್ಬಳ್ಳಿ)ಆ.13:- ಹುಬ್ಬಳ್ಳಿಯಲ್ಲಿ 122 ಕೋಟಿ ರೂ‌.ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ನ್ಯಾಯಾಲಯಗಳ ಸಂಕೀರ್ಣವನ್ನು ಭಾರತದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನಾಯಮೂರ್ತಿಗಳಾದ ದೀಪಕ ಮಿಶ್ರಾ ಉದ್ಘಾಟಿಸಿದರು.

ಹುಬ್ಬಳ್ಳಿ ಮ ತಿಮ್ಮಸಾಗರ ಗ್ರಾಮ, ಹೊಸೂರು ಉಣಕಲ್ ರಸ್ತೆಯಲ್ಲಿ ನಿರ್ಮಿಸಲಾಗಿರುವ ಹುಬ್ಬಳ್ಳಿ ನೂತನ  ನ್ಯಾಯಲಯಗಳ ಸಂಕೀರ್ಣದ ಉದ್ಘಾಟನೆಯನ್ನು ಸರ್ವೋಚ್ಛ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧಿಶರುಗಳಾದ ಮೋಹನ್ ಎಂ ಶಾಂತನಗೌಡರ್, ಎಸ್ ಅಬ್ದುಲ್ ನಜೀರ್, ಹಾಗೂ     ಕರ್ನಾಟಕದ ಉಚ್ಛನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ದಿನೇಶ್ ಮಾಹೇಶ್ವರಿ, ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಲೋಕೋಪಯೋಗಿ ಸಚಿವರಾದ ಹೆಚ್ ಡಿ ರೇವಣ್ಣ, ಕರ್ನಾಟಕ ಉಚ್ಛ ನ್ಯಾಯಾಲಯದ ಗೌರವಾನ್ವಿತ ನ್ಯಾಧೀಶರುಗಳಾದ ರವಿ ಮಳಿಮಠ, ಉಚ್ಛ ನ್ಯಾಯಾಲಯದ ಆಡಳಿತಾತ್ಮಕ ನ್ಯಾಯಮೂರ್ತಿ ಬೂದಿಹಾಳ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಟಿ ಎಂ ವಿಜಯ ಭಾಸ್ಕರ್, ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಈಶಪ್ಪ ಭೂತೆ, ಹುಬ್ಬಳ್ಳಿ ವಕೀಲರ ಸಂಘದ ಅಧ್ಯಕ್ಷರಾದ ಎ ಬಿ ಬಳಿಗಾರ್ ಮತ್ತಿತರರು ಉಪಸ್ಥಿತಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: