ಪ್ರಮುಖ ಸುದ್ದಿ

ಹಿಂದುಳಿದ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ನೀಡುವ ಕೆಲಸಗಳನ್ನು ಸಾಮಾಜಿಕ ಸಂಘಟನೆಗಳು ಮಾಡಬೇಕು : ಡಾ.ಜಯಮಾಲಾ

ರಾಜ್ಯ(ಮಂಗಳೂರು)ಆ.13:- ಸಮಾಜದ ಹಿಂದುಳಿದ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ನೀಡುವ ಕೆಲಸಗಳನ್ನು ಸಾಮಾಜಿಕ ಸಂಘಟನೆಗಳು ಮಾಡಬೇಕು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಡಾ.ಜಯಮಾಲಾ ಹೇಳಿದರು.

ಅವರು ಮಂಗಳೂರಿನ ಪುರಭವನದಲ್ಲಿ ನಡೆದ ನಾರಾಯಣ ಗುರು ಯುವ ವೇದಿಕೆಯ ಶೈಕ್ಷಣಿಕ ಪುರಸ್ಕಾರ ಹಾಗೂ ಸಾಧನಶೀಲರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಸಾಧಕರನ್ನು ಅಭಿನಂದಿಸಿ ಮಾತನಾಡಿದರು. ನಾರಾಯಣ ಗುರುಗಳು ಹಿಂದುಳಿದ ಸಮಾಜಕ್ಕೆ ಬೆಳಕು ನೀಡಿದವರು ಹಾಗೂ ಸ್ವಾಭಿಮಾನದ ಬದುಕು ಕಟ್ಟಿಕೊಡಲು ಮಾರ್ಗದರ್ಶನ ಮಾಡಿದ ಶ್ರೇಷ್ಠ ದಾರ್ಶನಿಕರು. ಬ್ರಹ್ಮ ಶ್ರೀ ನಾರಾಯಣ ಗುರುಗಳ ಆದರ್ಶದಂತೆ ಸಮಾಜವನ್ನು ಕಟ್ಟುವ ಕೆಲಸವನ್ನು ನಿರ್ವಹಿಸಬೇಕಾಗಿದೆ ಎಂದು ಹೇಳಿದರು. ಕಳೆದ ಹದಿನೆಂಟು ವರ್ಷಗಳಿಂದ ಸಮಾಜಕ್ಕೆ ಆದರ್ಶಪ್ರಾಯವಾಗುಂತಹ ಕೆಲಸವನ್ನು ನಡೆಸಿಕೊಂಡು ಬರುತ್ತಿರುವ ನಾರಾಯಣ ಗುರು ಯುವ ವೇದಿಕೆಯ ಕಾರ್ಯವನ್ನು ಸಚಿವರು ಅಭಿನಂದಿಸಿದರು. ಯುವ ವೇದಿಕೆಯ ಕಾರ್ಯಕ್ರಮಗಳಿಗೆ ಎಲ್ಲಾ ರೀತಿಯ ಬೆಂಬಲ ಹಾಗೂ ಸಹಕಾರವನ್ನು ನೀಡುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಯುವ ಸಾಧಕರನ್ನು ಸಚಿವರು ಅಭಿನಂದಿಸಿದರು.

ಸಮಾರಂಭದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಶಾಸಕ ವೇದವ್ಯಾಸ ಕಾಮತ್, ಮಾಜಿ ಸಚಿವ ಕೃಷ್ಣ ಪಾಲೇಮಾರ್ ನೀಲಯ್ಯ ಅವರು, ಎಂ ಎಸ್ ಕೋಟ್ಯಾನ್, ಪದ್ಮನಾಭ, ಬೃಜೇಶ್ ಅಂಚನ್, ಆಕಾಶ್ ಕೋಟ್ಯಾನ್, ಚಿತ್ತರಂಜನ್ ಭಾಗವಹಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: