ದೇಶಪ್ರಮುಖ ಸುದ್ದಿ

ಸೋಮನಾಥ ಚಟರ್ಜಿ ನಿಧನ: ಮಾಜಿ ಪ್ರಧಾನಿ ಕಂಪನಿ

ಬೆಂಗಳೂರು (ಆ.13): ಸಿಪಿಎಂನ ಹಿರಿಯ ನಾಯಕ ಹಾಗೂ ಲೋಕಸಭೆ ಮಾಜಿ ಅಧ್ಯಕ್ಷ ಸೋಮನಾಥ ಚಟರ್ಜಿ ಅವರ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕಂಬನಿ ಮಿಡಿದಿದ್ದಾರೆ.

ಚಟರ್ಜಿ ಅವರ ನಿಧನ ಮನಸ್ಸಿಗೆ ಬಹಳ ನೋವುಂಟು ಮಾಡಿದೆ. ಅಜಾತಶತ್ರುವಾಗಿದ್ದ ಚಟರ್ಜಿಯವರು, ಲೋಕಸಭಾ ಅಧ್ಯಕ್ಷರಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದರು. 1996ರಲ್ಲಿ ಉತ್ತಮ ಸಂಸದೀಯಪಟು ಪ್ರಶಸ್ತಿ ಚಟರ್ಜಿ ಅವರಿಗೆ ದೊರಕಿತ್ತು ಎಂದು ಗೌಡರು ಸ್ಮರಿಸಿದ್ದಾರೆ.

ಮೃತರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಮತ್ತು ಅವರ ಕುಟುಂಬ ವರ್ಗಕ್ಕೆ ದೇವರು ಈ ಸಾವಿನ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಗೌಡರು ತಮ್ಮ ಶೋಕ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.

ಸಚಿವ ಜಿ.ಟಿ ದೇವೇಗೌಡರಿಂದ ಸಂತಾಪ: ಲೋಕಸಭೆಯ ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿ ಅವರ ನಿಧನದಿಂದ ದೇಶಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ತಿಳಿಸಿದ್ದಾರೆ. ಉತ್ತಮ ಸಂಸದೀಯಪಟುವಾಗಿದ್ದ ಚಟರ್ಜಿ ಅವರು, ಪ್ರಜಾತಾಂತ್ರಿಕ ನಡವಳಿಕೆಯಲ್ಲಿ ರಾಜಕಾರಣಿಗಳಿಗೆ ಮಾದರಿಯಾಗಿದ್ದರು ಎಂದು ಸಚಿವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: