
ಮೈಸೂರು
ಕಾರು ಹರಿದು ಮಗು ಸಾವು
ಆಟವಾಡುತ್ತಿದ್ದ ಮಗುವಿನ ಮೇಲೆ ಕಾರು ಹರಿದ ಪರಿಣಾಮ ಎರಡು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಆನಗಟ್ಟಿ ಗ್ರಾಮದಲ್ಲಿ ನಡೆದಿದೆ.
ಮೃತ ಮಗುವನ್ನು ಬಳ್ಳಾರಿ ಮೂಲದ ಆನಗಟ್ಟಿಯಲ್ಲಿ ವಾಸಿಸುತ್ತಿದ್ದ ಸಂತೋಷ್ ನಾಯಕ ಹಾಗೂ ಜ್ಯೋತಿ ಬಾಯಿ ಎಂಬವರ ಪುತ್ರ ಮಂಜು ಎಂದು ಗುರುತಿಸಲಾಗಿದೆ.
ಮಗು ರಸ್ತೆಯ ಬದಿಯಲ್ಲಿ ಆಟವಾಡುತ್ತಿದ್ದ ವೇಳೆ ವೇಗದಿಂದ ಬಂದ ಕಾರು ಮಗುವಿನ ಮೇಲೆ ಹರಿದಿದೆ. ಇದರ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ತಂದೆ-ತಾಯಿಯ ಕಣ್ಣೆದುರೇ ಈ ದುರ್ಘಟನೆ ನಡೆದಿದೆ. ಸ್ಥಳದಲ್ಲಿದ್ದ ಜನರು ಕಾರನ್ನು ತಡೆಯಲು ಯತ್ನಿಸಿದ್ದು ಕಾರು ಚಾಲಕ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಬೀಚನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಶೋಧ ನಡೆಸಿದ್ದಾರೆ.