ಮೈಸೂರು

ಡಿ.23-24 ಸಿಎಂ ಮೈಸೂರು ಪ್ರವಾಸ

ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.23-24ರಂದು ಪ್ರವಾಸ ಕೈಗೊಳ್ಳಲಿದ್ದಾರೆ.

ಡಿ.23ರಂದು ಬೆಳಿಗ್ಗೆ 10.35ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ ಬೆಳಿಗ್ಗೆ 11ಗಂಟೆಗೆ ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಕಲಾಮಂದಿರದ ಬಳಿಯ ವಿದ್ಯುತ್ ಉಪಕೇಂದ್ರದ ಶಿಲಾನ್ಯಾಸ ನೆರವೇರಿಸಲಿದ್ದು, ಮಧ್ಯಾಹ್ನ 3 ಗಂಟೆಗೆ ಕಲಾಮಂದಿರದಲ್ಲಿ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 4 ಗಂಟೆಗೆ ಕರ್ನಾಟಕ ಪೊಲೀಸ್ ಅಕಾಡೆಮಿ ಆವರಣದಲ್ಲಿ 60ನೇ ಅಖಿಲ ಭಾರತ ಪೊಲೀಸ್ ಕರ್ತವ್ಯ ಕೂಟದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದು, ಸಂಜೆ 5 ಗಂಟೆಗೆ ಅರಮನೆ ಆವರಣದಲ್ಲಿ ಪುಷ್ಪಪ್ರದರ್ಶನ ಉದ್ಘಾಟಿಸಿದ ಬಳಿಕ ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಡಿ.24 ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿನ ವೈದ್ಯಕೀಯ ಕಾಲೇಜಿನ ಅಮೃತ ಮಹೋತ್ಸವ ಭವನದಲ್ಲಿ ಅಂಬೇಡ್ಕರ್ ಮಹಾಪರಿನಿರ್ವಾಣ ನಿಮಿತ್ತ ನಡೆಯುವ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.

Leave a Reply

comments

Related Articles

error: