ಸುದ್ದಿ ಸಂಕ್ಷಿಪ್ತ

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮೈಸೂರು,ಆ.14-ಸರ್ಕಾರವು 06 ವರ್ಷ ಮೇಲ್ಪಟ್ಟ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು, ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ, ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಪ್ರಶಸ್ತಿ ಮತ್ತು ಬಾಲಕಿಯರಿಗೆ `ಕೆಳದಿ ಚೆನ್ನಮ್ಮ ಪ್ರಶಸ್ತಿ’ ನೀಡಿ, ಗೌರವಿಸಲು  ಅರ್ಜಿ ಆಹ್ವಾನಿಸಿದೆ.

ಈ ಪ್ರಶಸ್ತಿಯು ರೂ.10,000/-ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಅಸಾಧಾರಣ ಧೈರ್ಯ, ಶೌರ್ಯ ಸಾಧಿಸಿರುವ ಪ್ರಕರಣವು ಆಗಸ್ಟ್-2017 ರಿಂದ ಜುಲೈ-2018 ರೊಳಗೆ ನಡೆದಿರಬೇಕು.

ಈ ಸಾಧನೆಯು ಜಿಲ್ಲಾ ಮಟ್ಟದಲ್ಲಿ ಗುರುತಿಸಿರಬೇಕು. ಶೌರ್ಯ ಸಾಧನೆ ತೋರಿದ ಬಗ್ಗೆ, ಆರಕ್ಷಕ ಇಲಾಖೆಯ ಪ್ರಾಥಮಿಕ ತನಿಖಾ ವರದಿ (ಎಫ್.ಐ.ಆರ್) ಅನ್ನು ಲಗತ್ತಿಸಬೇಕು. ಈ ಹಿಂದೆ ಯಾವುದಾದರೂ ವರ್ಷಗಳಲ್ಲಿ ತಮ್ಮ ಪ್ರಸ್ತಾವನೆಯು ಜಿಲ್ಲಾ/ರಾಜ್ಯ/ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಪರಿಗಣಿಸಲ್ಪಟ್ಟಿದ್ದಲ್ಲಿ ಮತ್ತೊಮ್ಮೆ ಸಲ್ಲಿಸಲು ಅವಕಾಶವಿರುವುದಿಲ್ಲ.

ನಿಗದಿತ ಅರ್ಜಿ ನಮೂನೆಗಳನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಪಿ.ಎಸ್-1, ಹೈಟೆನ್ಷನ್ ಲೈನ್ ರಸ್ತೆ, ಕೃಷ್ಣದೇವರಾಯ ಸರ್ಕಲ್, ವಿಜಯನಗರ 2ನೇ ಹಂತ,  ಮೈಸೂರು-17, ಇಲ್ಲಿ ಕಚೇರಿ ಕೆಲಸದ ವೇಳೆಯಲ್ಲಿ ಪಡೆದುಕೊಂಡು, ಕನ್ನಡ ಭಾಷೆಯಲ್ಲಿ ಭರ್ತಿಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಆ.31 ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ.ಸಂ.2498031 ಅಥವಾ 2495432ನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: