
ಮೈಸೂರು
ರಂಗಭೂಮಿ ಮತ್ತು ಮಹಿಳೆ ವಿಚಾರ ಸಂಕಿರಣ ಉದ್ಘಾಟನೆ
ಮೈಸೂರಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕದಂಬ ರಂಗವೇದಿಕೆ ಸಂಯುಕ್ತಾಶ್ರಯದಲ್ಲಿ ರಂಗಭೂಮಿ ಮತ್ತು ಮಹಿಳೆ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು.
ರಂಗಭೂಮಿ ಮತ್ತು ಮಹಿಳೆ ವಿಚಾರ ಸಂಕಿರಣವನ್ನು ಕಲಾವಿದೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ರಾಮೇಶ್ವರಿ ವರ್ಮಾ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.
ವೇದಿಕೆಯಲ್ಲಿ ಹಿರಿಯ ರಂಗಕಲಾವಿದೆ ಶ್ರೀಮತಿ ಹರಿಪ್ರಸಾದ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ, ಕದಂಬ ರಂಗವೇದಿಕೆ ಅಧ್ಯಕ್ಷ ರಾಜಶೇಖರ ಕದಂಬ, ರಂಗಕರ್ಮಿ ಶ್ರೀಕಂಠ ಗುಂಡಪ್ಪ, ಕವಿ ಜಯಪ್ಪ ಹೊನ್ನಾಳಿ ಮತ್ತಿತರರು ಉಪಸ್ಥಿತರಿದ್ದರು.