
ಪ್ರಮುಖ ಸುದ್ದಿಮೈಸೂರು
ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ
ಮೈಸೂರಿನ ಕೆ.ಆರ್.ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ನಡುವೆ ಮಂಗಳವಾರ ತಡರಾತ್ರಿ ಮಾರಾಮಾರಿ ನಡೆದಿರುವುದು ವರದಿಯಾಗಿದೆ.
ಬಿಜೆಪಿ ಮುಖಂಡ ಎಚ್.ವಿ. ರಾಜೀವ್ ಜೊತೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ರಂಗನಾಥ್ ಮೇಲೆ ಮಾಜಿ ಸಚಿವ ಎಸ್.ಎ. ರಾಮದಾಸ್ ಬೆಂಬಲಿಗ ಸಾಗರ್ ಚಕ್ರವರ್ತಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಸಾಗರ್ ಸೇರಿ ನಾಲ್ವರ ತಂಡ ಬಿಜೆಪಿ ಕಾರ್ಯಕರ್ತ ರಂಗನಾಥ್ ಮೇಲೆ ಹಲ್ಲೆ ನಡೆಸಿದೆ ಎನ್ನಲಾಗಿದ್ದು, ತೀವ್ರವಾಗಿ ಗಾಯಗೊಂಡ ರಂಗನಾಥ್ ಅವರನ್ನು ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ. ರಂಗನಾಥ್ ಮೊದಲು ರಾಮದಾಸ್ ತಂಡದಲ್ಲಿದ್ದು, ಕೆಲ ದಿನಗಳಿಂದ ರಾಜೀವ್ ಅವರ ಜೊತೆ ಗುರುತಿಸಿಕೊಂಡಿದ್ದೇ ಹಲ್ಲೆಗೆ ಕಾರಣ ಎನ್ನಲಾಗಿದೆ.
ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆದಿದೆ ಎಂದು ಬಿಂಬಿಸಲಾಗುತ್ತಿದೆ. ನಿಜವಾಗಿ ಕಪ್ಪುಹಣ ಬಿಳಿ ಮಾಡುವ ವಿಚಾರವಾಗಿ ಈ ಹಲ್ಲೆ ನಡೆದಿದೆ ಎಂದು ಬಿಜೆಪಿ ಕಾರ್ಯಕರ್ತರು ಮಾತನಾಡಿಕೊಳ್ಳುತ್ತಿದ್ದಾರೆ. ಕೆ.ಆರ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.