ಕರ್ನಾಟಕಮನರಂಜನೆ

ಒಂದೇ ವೇದಿಕೆಯ ಮೇಲೆ ಪ್ರಶಸ್ತಿ ಸ್ವೀಕರಿಸಲಿರುವ ದರ್ಶನ್-ಸುದೀಪ್

ಬೆಂಗಳೂರು (ಆ.16): ನಾಡಪ್ರಭು ಕೆಂಪೇಗೌಡರ ದಿನಾಚರಣೆ ಅಂಗವಾಗಿ ಇಂದು ನಡೆಯಲಿರುವ ಸಮಾರಂಭದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ನಟರಾದ ಸುದೀಪ್ ಹಾಗೂ ದರ್ಶನ್ ಅವರು ಒಂದೇ ವೇದಿಕೆಯ ಮೇಲೆ ಕೆಂಪೇಗೌಡ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಬಿಬಿಎಂಪಿ ನೀಡುವ ಕೆಂಪೇಗೌಡ ಪ್ರಶಸ್ತಿಗೆ ಚಲನಚಿತ್ರ ಕ್ಷೇತ್ರದಿಂದ ಸುದೀಪ್ ಅವರನ್ನು ಆಯ್ಕೆ ಮಾಡಲಾಗಿತ್ತು. ದರ್ಶನ್ ಅಭಿಮಾನಿಗಳು ಶಾಸಕ ಗೋಪಾಲಯ್ಯ ಅವರನ್ನು ಭೇಟಿ ಮಾಡಿ ದರ್ಶನ್ ಅವರಿಗೂ ಕೆಂಪೇಗೌಡ ಪ್ರಶಸ್ತಿ ನೀಡುವಂತೆ ಒತ್ತಾಯ ಮಾಡಿದ್ದರು ಎನ್ನಲಾಗಿದೆ. ಇದೀಗ ಕಿಚ್ಚ ಸುದೀಪ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಬ್ಬರಿಗೂ ಒಂದೇ ವೇದಿಕೆಯ ಮೇಲೆ ಪ್ರಶಸ್ತಿ ನೀಡಲು ಬಿಬಿಎಂಪಿ ನಿರ್ಧಾರ ಮಾಡಿದೆಯಂತೆ.

ನಾಡಪ್ರಭು ಕೆಂಪೇಗೌಡ ದಿನಾಚರಣೆ ನಿಮಿತ್ತ ಸಂಜೆ 6 ಗಂಟೆಗೆ ರಾಜ್ಯ ರಾಜಧಾನಿ ಬೆಂಗಳೂರಿನ ಗಾಜಿನ ಮನೆಯ ಒಂದೇ ವೇದಿಕೆಯಲ್ಲಿ ದರ್ಶನ್ ಮತ್ತು ಸುದೀಪ್ ಅವರು ಒಟ್ಟಿಗೆ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಸುದೀಪ್ ಪ್ರಶಸ್ತಿ ಸ್ವೀಕರಿಸಲು ಬರುವುದು ನಿಶ್ಚಿತವಾಗಿದ್ದು, ದರ್ಶನ್ ಕೂಡ ಆಗಮಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಈ ಮೂಲಕ ಗೆಳೆಯರು ವೇದಿಕೆ ಮತ್ತೆ ಒಂದಾಗುತ್ತಾರಾ ಎಂದು ಇಬ್ಬರೂ ನಟರ ಅಭಿಮಾನಿಗಳು ಎದುರುನೋಡುತ್ತಿದ್ದಾರೆ. (ಎನ್.ಬಿ)

Leave a Reply

comments

Related Articles

error: