ಸುದ್ದಿ ಸಂಕ್ಷಿಪ್ತ

ಕುಶಲಕರ್ಮಿ ವಸತಿ ಕಾರ್ಯಾಗಾರ : ಅರ್ಜಿ ಆಹ್ವಾನ

ಮೈಸೂರು,ಆ.16 : ಸರ್ಕಾರದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಪ್ರಸಕ್ತ ಸಾಲಿನ ವಿಶೇಷ ಘಟಕ/ಗಿರಿಜನ ಉಪಯೋಜನೆಯಡಿ ಪ.ಜಾತಿ/ಪಂಗಡದ ಗ್ರಾಮೀಣ ಕುಶಲಕರ್ಮಿಗಳಿಗೆ ವಸತಿ ಕಾರ್ಯಾಗಾರ ನಿರ್ಮಿಸಲು ಅರ್ಹ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಂಬಂಧಪಟ್ಟ ದಾಖಲೆಗಳೊಂದಿಗೆ ಆಯಾ ತಾಲ್ಲೂಕಿನ ಕೈಗಾರಿಕಾ ವಿಸ್ತರಣಾ ಅಧಿಕಾರಿಗಳು ಮತ್ತು ಉಪವಿಭಾಗದ ಸಹಾಯಕ ನಿರ್ದೇಶಕರವರಿಂದ ಮಾಹಿತಿ ಪಡೆಯಬಹುದಾಗಿದೆ, ಆ.27ರಂದು ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: