ಪ್ರಮುಖ ಸುದ್ದಿಮೈಸೂರು

ಮೊದಲ ಬಾರಿಗೆ ಕೊಡಗು ಮೈಸೂರು ಸಂಪರ್ಕ ಕಡಿತ : ಸಂಸದ ಪ್ರತಾಪ್ ಸಿಂಹ ಭೇಟಿ, ಪರಿಶೀಲನೆ

ಮೈಸೂರು,ಆ.17:- ನಿರಂತರ ಮಳೆಯಿಂದಾಗಿ ಕೊಡಗು ಜಿಲ್ಲೆ  ತತ್ತರಿಸಿ ಹೋಗಿದ್ದು, ವರುಣನ ಆರ್ಭಟದಿಂದಾಗಿ ಇದೇ ಮೊದಲ ಬಾರಿಗೆ ಕೊಡಗು- ಮೈಸೂರು ಸಂಪರ್ಕ ಕಡಿತಗೊಂಡಿದೆ.

ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ನದಿಗಳು ಉಕ್ಕಿ ಹರಿಯುತ್ತಿದ್ದು, ಕೊಡಗಿನಲ್ಲಿ ಪ್ರವಾಹದ  ಸ್ಥಿತಿ ಸೃಷ್ಟಿಯಾಗಿದೆ. ಹಲವೆಡೆ ರಸ್ತೆ ಸಂಪರ್ಕಗಳು ಸಂಪೂರ್ಣ ಕಡಿತಗೊಂಡಿದೆ. ಕುಶಾಲನಗರ ಜಲಾವೃತವಾಗುವ ಭೀತಿ ಎದುರಾಗಿದೆ. ಪಿರಿಯಾಪಟ್ಟಣ ಗಡಿ ಹಾಗೂ ಕುಶಾಲನಗರದ ಕಾವೇರಿ ಸೇತುವೆ ಬಳಿ ಎಲ್ಲಾ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ.  ಇದೇ ಮೊದಲ ಬಾರಿಗೆ ಕೊಡಗು ಮೈಸೂರು ಸಂಪರ್ಕ ಕಡಿತಗೊಂಡಿದೆ. ಇಂದು ಕಂದಾಯ ಸಚಿವ ಆರ್ ವಿ ದೇಶ ಪಾಂಡೆ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸಂಸದ ಪ್ರತಾಪ್ ಸಿಂಹ ಭೇಟಿ

ಕೊಡಗಿನಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಮಳೆಯಿಂದ ಜಲಾವೃತವಾಗಿದ್ದ ಸ್ಥಳಗಳಿಗೆ ಕೊಡಗು -ಮೈಸೂರು ಸಂಸದ  ಪ್ರತಾಪ್ ಸಿಂಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮನೆ ಕಳೆದುಕೊಂಡಿರುವ ನಿರಾಶ್ರಿತರಿಗೆ ಸೂಕ್ತ ಪರಿಹಾರ ಕೊಡಿಸುವ ಭರವಸೆಯನ್ನು ಸಂಸದ ಪ್ರತಾಪ್ ಸಿಂಹ ನೀಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: