ಮೈಸೂರು

ಕಾವ್ಯ ಮನಸ್ಸಿಗೆ ಮುದ, ಸಮಾಜಕ್ಕೆ ಸಂದೇಶ ನೀಡುತ್ತದೆ: ಕಂಪಲಾಪುರ ಮೋಹನ್

ಬೈಲಕುಪ್ಪೆ: ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಾಗ ಸುಸಂಸ್ಕೃತರಾಗಿ ಬೆಳೆಯಲು ಸಾಧ್ಯ ಎಂದು ಮನೆಮನೆ ಕವಿಗೋಷ್ಠಿ ಬಳಗದ ಅಧ್ಯಕ್ಷ ಕಂಪಲಾಪುರ ಮೋಹನ್ ಅವರು ಕಿವಿಮಾತು ಹೇಳಿದರು.

ಪಟ್ಟಣದ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಮಾದರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ನಡೆಸಲಾದ 202ನೇ ಮನೆಮನೆ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು. ಕಾವ್ಯ ಮನಸ್ಸಿಗೆ ಮುದ ನೀಡುವುದಲ್ಲದೆ ಸಮಾಜಕ್ಕೆ ಸಂದೇಶ ನೀಡುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಉತ್ತಮ ಕಾವ್ಯ ರಚಿಸುವಂತೆ ಮನೆಮನೆ ಕವಿಗೋಷ್ಠಿ ಬಳಗದ ಅಧ್ಯಕ್ಷ ಕಂಪಲಾಪುರ ಮೋಹನ್ ಕಿವಿ ಮಾತು ಹೇಳಿದರು.

ನಿವೃತ್ತ ಯೋಧ ಬಿ.ಸಿ. ತಮ್ಮೇಗೌಡ ಮಾತನಾಡಿ, ವಿದ್ಯಾರ್ಥಿಗಳು ದೇಶಪ್ರೇಮ ಬೆಳಸಿಕೊಳ್ಳಬೇಕು. ಬದುಕಿನಲ್ಲಿ ಶ್ರದ್ಧೆ, ಏಕಾಗ್ರತೆ, ಸೌಹಾರ್ದತೆ ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಮುಖ್ಯ ಶಿಕ್ಷಕ ಎಚ್.ಎನ್. ಬಸವರಾಜ್ ಮಾತನಾಡಿ, ವಿದ್ಯಾರ್ಥಿಗಳು ದಿನವೂ ವೃತ್ತಪತ್ರಿಕೆಗಳನ್ನು ಓದುವ ಹವ್ಯಾಸ ಬೆಳಸಿಕೊಂಡಾಗ ಜ್ಞಾನ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.

ಶಿಕ್ಷಕರಾದ ವಿ.ಜೆ. ಜಯಶ್ರೀ, ಕೆ.ಸುನೀತ, ಎಸ್.ಆರ್. ರಮೇಶ್, ಬಿ.ಎಸ್. ಅಶೋಕ್ ಹಾಜರಿದ್ದರು. 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕವನ ವಾಚಿಸಿದರು.

Leave a Reply

comments

Related Articles

error: