ಸುದ್ದಿ ಸಂಕ್ಷಿಪ್ತ

ಬಡ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ : ಅರ್ಜಿ ಆಹ್ವಾನ

ಮೈಸೂರು,ಆ.17 : ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ವೀರಶೈವ ಮಠಾಧಿಪತಿಗಳ ಗೋಷ್ಠಿ ವತಿಯಿಂದ ಈ ಎರಡೂ ಜಿಲ್ಲೆಗಳ ಪ್ರತಿಭಾವಂತ ವೀರಶೈವ ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನಗದು ಬಹುಮಾನ ನೀಡಿ ಪುರಸ್ಕರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಬಡ ವಿದ್ಯಾರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಆ.20ರೊಳಗೆ ಜಗದ್ಗುರು ಡಾ.ಶ್ರೀಶಿವರಾತ್ರಿ ರಾಜೇಂದ್ರ ವೃತ್ತದಲ್ಲಿರುವ ಸಂಘದ ಕಚೇರಿಗೆ ಸಲ್ಲಿಸಬಹುದಾಗಿದ್ದು, ವಿವರಗಳಿಗೆ ಮೊ.ಸಂ. 9449030588 ಅನ್ನು ಸಂಪರ್ಕಿಸಬಹುದು ಎಂದು ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: