ಪ್ರಮುಖ ಸುದ್ದಿ

ಗಂಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ಥರಿಗೆ ಧೈರ್ಯ ತುಂಬಿದ ಸಚಿವರು

ರಾಜ್ಯ(ಮಡಿಕೇರಿ) ಆ.17 :- ಕಂದಾಯ ಸಚಿವರಾದ ಆರ್.ವಿ.ದೇಶಪಾಂಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಗುರುವಾರ ನಗರದ ಮೈತ್ರಿ ಭವನದಲ್ಲಿ ತೆರೆಯಲಾಗಿರುವ ಗಂಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ಥರಿಗೆ ಧೈರ್ಯ ತುಂಬಿದರು.

ಸಂತ್ರಸ್ಥರಿಗೆ ಎಲ್ಲಾ ರೀತಿಯ ನೆರವು ನೀಡಲಾಗುವುದು, ಯಾವುದೇ ಕಾರಣಕ್ಕೂ ದೃತಿಗೆಡಬಾರದು ಎಂದು ಸಚಿವರು ಹೇಳಿದರು.  ದಿನದ ಮೂರು ವೇಳೆ ಊಟೋಪಹಾರ, ಕಾಫಿ, ಟೀ ವ್ಯವಸ್ಥೆ ಮಾಡಲಾಗುವುದು, ಅಡುಗೆ ಅನಿಲ ಪೂರೈಕೆ ಹಾಗೂ ಅಧಿಕಾರಿಗಳನ್ನು ನಿಯೋಜಿಸುವಂತೆ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರವೀಣ್ ಕುಮಾರ್ ಇತರರು ಹಾಜರಿದ್ದರು.   (ಕೆಸಿಐ,ಎಸ್.ಎಚ್)

Leave a Reply

comments

Related Articles

error: