ಪ್ರಮುಖ ಸುದ್ದಿಮೈಸೂರು

ಕಪಿಲಾ ನದಿಯ ಪ್ರವಾಹಕ್ಕೆ ಸಿಲುಕಿದ ನಂಜನಗೂಡಿಗೆ ಸಚಿವದ್ವಯರ ಭೇಟಿ

ಮೈಸೂರು,ಆ.18:- ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಕಂದಾಯ ಮತ್ತು ಕೌಶಲಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಇಂದು ಬೆಳಿಗ್ಗೆ ಕಪಿಲಾ ನದಿಯ ಪ್ರವಾಹಕ್ಕೆ ಸಿಲುಕಿದ ನಂಜನಗೂಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇಂದು ಬೆಳಿಗ್ಗೆ ಕಪಿಲಾ ನದಿಯ ಪ್ರವಾಹದಿಂದ ಹಾನಿಗೊಳಗಾದ ನಂಜನಗೂಡು ತಾಲೂಕಿನ ಮಲ್ಲಯ್ಯನ ಮೂಲೆ ಮಠ, ಮುಡಿಕಟ್ಟೆ, ತೋಪಿನ ಬೀದಿ, ತೇರಿನ ಬೀದಿ ವಕ್ಕ, ಹಳ್ಳದ ಕೇರಿ, ಒಕ್ಕಲಗೇರಿ, ಸರಸ್ವತಿ ಕಾಲೋನಿ, ಹೆಜ್ಜಿಗೆ ಸೇತುವೆ, ಬೊಕ್ಕಹಳ್ಳಿ, ಕುಳ್ಳಂಕನ ಹುಂಡಿ, ಸುತ್ತೂರುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಗಂಜಿ ಕೇಂದ್ರಕ್ಕೂ ಭೇಟಿ  ನೀಡಿ, ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡರು. ಈ ಸಂದರ್ಭ ಮಾಜಿ ಶಾಸಕ ವಾಸು,ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ಸೇರಿದಂತೆ ಹಲವರು ಸಚಿವರ ಜೊತೆಗಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: