ಮೈಸೂರು

ಹಿಂದುಳಿದ, ದೀನದಲಿತ ವರ್ಗದವರನ್ನು ಸಮಾಜದ ಮುಖ್ಯವಾಹಿನಿಗೆ ಬರುವಂತೆ ಮಾಡಿದ ಮಹಾನ್ ಚೇತನ ದಿ.ದೇವರಾಜ್ ಅರಸ್ : ಅಭಿರಾಮ್ ಜಿ.ಶಂಕರ್

ಮೈಸೂರು,ಆ.20:- ಮೈಸೂರು  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ  ದಿ.ಡಿ.ದೇವರಾಜ್ ಅರಸ್ ಅವರ 103ನೇ ಹುಟ್ಟುಹಬ್ಬವನ್ನು ಪಡುವಾರಹಳ್ಳಿಯ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯದಲ್ಲಿಂದು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ದೇವರಾಜ್ ಅರಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರವ ಅರ್ಪಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಾಕಷ್ಟು ಜನಪ್ರಿಯ ಯೋಜನೆಗಳನ್ನು ರೂಪಿಸುವ ಮೂಲಕ ಹಿಂದುಳಿದ, ದೀನದಲಿತ ವರ್ಗದವರನ್ನು ಸಮಾಜದ ಮುಖ್ಯವಾಹಿನಿಗೆ ಬರುವಂತೆ ಮಾಡಿದ ಮಹಾನ್ ಚೇತನ ದಿ.ದೇವರಾಜ್ ಅರಸ್ ಆಗಿದ್ದರು ಎಂದು ಬಣ್ಣಿಸಿದರು. ವಿದ್ಯಾರ್ಥಿಗಳು ಅವರ ಆದರ್ಶವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್, ಸಮಾಜ ಮತ್ತು ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸೋಮಶೇಖರ್,ವಿದ್ಯಾರ್ಥಿನಿಲಯದ ಮುಖ್ಯಸ್ಥರು ಸೇರಿದಂತೆ ಹಲವರು ಉಪಸ್ಥಿತರಿದ್ದರು.  (ಕೆ.ಎಸ್,ಎಸ್.ಎಚ್)

 

 

Leave a Reply

comments

Related Articles

error: