ಪ್ರಮುಖ ಸುದ್ದಿ

ಗೋವಾ ಪರಿಸರ ಸುರಕ್ಷತೆಗೆ ಕ್ರಮ ಕೈಗೊಳ್ಳದಿದ್ದಲ್ಲಿ ಕೇರಳದ ಪರಿಸ್ಥಿತಿಯನ್ನೇ ಎದುರಿಸಬೇಕಾಗುತ್ತದೆ : ಮಾಧವ್ ಗಾಡ್ಗೀಳ್ ಎಚ್ಚರಿಕೆ

ದೇಶ(ಪಣಜಿ)ಆ.20:- ಗೋವಾ ಪರಿಸರ ಸುರಕ್ಷತೆಗೆ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದೊಂದು ದಿನ ಕೇರಳದ ಪರಿಸ್ಥಿತಿಯನ್ನೇ ಎದುರಿಸಬೇಕಾಗುತ್ತದೆ ಎಂದು ಪರಿಸರ ತಜ್ಞ ಮಾಧವ್ ಗಾಡ್ಗೀಳ್ ಎಚ್ಚರಿಸಿದ್ದಾರೆ

ಎಲ್ಲಾ ರಾಜ್ಯಗಳಂತೆ ಗೋವಾದಲ್ಲಿಯೂ ಕೂಡ ಲಾಭಕ್ಕಾಗಿ ಪರಿಸರ ನಾಶ ಮಾಡಲಾಗುತ್ತಿದೆ. ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿ ಎಲ್ಲ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಕೇರಳದಲ್ಲಿರುವಷ್ಟು ಪಶ್ಚಿಮ ಘಟ್ಟಗಳು ಗೋವಾದಲ್ಲಿರದಿದ್ದರೂ ಮಳೆಯಿಂದ ಅಪಾರ ಹಾನಿ ಸಂಭವಿಸಲಿದೆ ಎಂದು ತಿಳಿಸಿದ್ದಾರೆ. ಅಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂಬ ಮಾತು ಕೇಳಿ ಬಂದಿದೆ. ಇದು ಪ್ರಕೃತಿಯ ಮೇಲೆ ತೀವ್ರ ಪರಿಣಾಮ ಬೀರಲಿದೆ. ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಅಪಾಯ ಕಟ್ಟಿಟ್ಟ ಬುತ್ತಿ. ಈಗ ಕೇರಳದಲ್ಲಿ ಉಂಟಾಗಿರುವ ಪ್ರವಾಹ ಮುಂದಿನ ದಿನಗಳಲ್ಲಿ ಗೋವಾದಲ್ಲಿ ಕಾಣಿಸಿಕೊಂಡರೆ ಅಚ್ಚರಿಯೇನಿಲ್ಲ ಎಂದಿದ್ದಾರೆ. (ಎಸ್.ಎಚ್)

Leave a Reply

comments

Related Articles

error: