
ಮೈಸೂರು
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಡಾ.ಎಂ.ಎಸ್.ವಿಶ್ವೇಶ್ವರ ಅವರಿಂದ 3 ಲಕ್ಷ ರೂ. ನೆರವು
ಮೈಸೂರು,ಆ.21-ಕೊಡಗಿನ ನೆರೆ ಸಂತ್ರಸ್ತರಿಗೆ ನೆರವಿಗೆ ಮುಂದಾಗಿರುವ ಎಚ್ ಸಿಜಿ ಭಾರತ್ ಹಾಸ್ಪಿಟಲ್ ಅಂಡ್ ಇನ್ ಸ್ಟಿಟ್ಯೂಟ್ ಆಫ್ ಆಂಕೊಲಾಜಿ ಮುಖ್ಯ ವಿಕಿರಣ ಆಂಕೋಲಾಜಿಸ್ಟ್ ಮತ್ತು ವೈದ್ಯಕೀಯ ಅಧೀಕ್ಷರಾದ ಡಾ.ಎಂ.ಎಸ್.ವಿಶ್ವೇಶ್ವರ ಅವರು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಮೂರು ಲಕ್ಷ ರೂ. ಗಳನ್ನು ನೀಡಿದ್ದಾರೆ.
ಧನಾದೇಶ ನಂ.003859 ರಂತೆ ಸ್ವೀಕರಿಸಿರುವ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಇಂದು ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ. (ಎಂ.ಎನ್)