ಕರ್ನಾಟಕಪ್ರಮುಖ ಸುದ್ದಿ

ಮಲೆನಾಡು ಮಳೆಪೀಡಿತ ಪ್ರದೇಶಕ್ಕೆ ಗೌಡರ ಭೇಟಿ: ಸಂತ್ರಸ್ತರಿಗೆ ತಕ್ಷಣ ನೆರವು ಒದಗಿಸಲು ಸೂಚನೆ

ಹಾಸನ (ಆ.21): ಸತತವಾಗಿ ಸುರಿದ ಮಹಾ ಮಳೆಯಿಂದಾಗಿ ಮಲೆನಾಡಿನಲ್ಲಿ ಹಾನಿಗೀಡಾಗಿರುವ ಪ್ರದೇಶದಲ್ಲಿ ಅಪಾಯಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಸ್ಪಂದಿಸಿ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಲು ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಮಾಜಿ ಪ್ರಧಾನಿ ಹಾಗೂ ಹಾಲಿ ಲೋಕಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡ ಅವರು ಸೂಚಿಸಿದರು.

ಮಹಾ ಮಳೆಯಿಂದಾಗಿ ಮಲೆನಾಡಿನಲ್ಲಿ ಹಾನಿಗೀಡಾಗಿರುವ ಸಕಲೇಶಪುರ ತಾಲ್ಲೂಕಿನ ಉಚ್ಚಂಗಿ, ಹಿಜ್ಜನಹಳ್ಳಿ, ಮಾಗೇರಿ, ಬಿಸಲೆ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯ ಪ್ರಮಾಣವನ್ನು ವೀಕ್ಷಣೆ ಮಾಡಿದ ಮಾಜಿ ಪ್ರಧಾನಿ ಹಾಗೂ ಹಾಲಿ ಲೋಕಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡ ಅವರು ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಕೃತಿ ವಿಕೋಪದಿಂದ ಹಾನಿಗೀಡಾಗಿರುವ ಪ್ರದೇಶಕ್ಕೆ ಭೇಟಿ ನೀಡಿದ ದೇವೇಗೌಡರು ಹಾನಿಯ ಗಂಭೀರತೆಗೆ ಕಳವಳ ವ್ಯಕ್ತ ಪಡಿಸಿದರು. ಗುಡ್ಡಗಳು ಕುಸಿದಿದ್ದು, ರಸ್ತೆಗಳು ಹಾನಿಗೀಡಾಗಿವೆ ಜನರು ಸಂಕಷ್ಟಕೆ ಸಿಲುಕಿದ್ದಾರೆ. ಆಸ್ತಿಪಾಸ್ತಿಗಳು ನಷ್ಟವಾಗಿವೆ. ಈ ಹಿನ್ನಲೆಯಲ್ಲಿ ಜನರ ನೆರವಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಮುಂದಾಗಿದೆ ಪ್ರಧಾನಮಂತ್ರಿ ಅವರೊಂದಿಗೆ ಮಾತನಾಡಿ ಶಾಶ್ವತ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಕಾಫಿ ಬೆಳೆ ನಷ್ಟವಾಗಿದ್ದು, ಪರಿಹಾರಕ್ಕೆ ಕೇಂದ್ರ ಸರ್ಕಾರದ ಜೊತೆಗೆ ಮಾತನಾಡುವುದಾಗಿ ಅವರು ತಿಳಿಸಿದರು. ನಿರಾಶ್ರಿತರಿಗೆ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಸೂಚಿಸಿದ ಅವರು ಸಾರ್ವಜನಿಕರು ಕೂಡ ಸ್ಪಂದಿಸುವಂತೆ ತಿಳಿಸಿದರು.

ಶಾಸಕರಾದ ಹೆಚ್.ಕೆ.ಕುಮಾರಸ್ವಾಮಿ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ವಾಡ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಸುಪ್ರದೀಪ್ ಯಜಮಾನ್, ಜಿಲ್ಲಾ ಪಂಚಾಯತಿ ಸದಸ್ಯರಾದ ಉಜ್ಮರಿಜ್ವಿ ಸುದರ್ಶನ್, ಉಪವಿಭಾಗಾಧಿಕಾರಿ ಲಕ್ಷ್ಮಿಕಾಂತರೆಡ್ಡಿ, ವಣಗೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಆನಂದ್, ತಹಸೀಲ್ದಾರ್ ಗಿರೀಶ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು. (ಎನ್.ಬಿ)

Leave a Reply

comments

Related Articles

error: