ಸುದ್ದಿ ಸಂಕ್ಷಿಪ್ತ

ಆ.27ರಂದು ಬ್ರಹ್ಮಶ್ರೀ ನಾರಾಯಣ ಗುರೂಜಿ ಜಯಂತಿ

ಹಾಸನ (ಆ.22): ಬ್ರಹ್ಮಶ್ರೀ ನಾರಾಯಣ ಗುರೂಜಿ ಜಯಂತಿಯನ್ನು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಯವರ ನ್ಯಾಯಾಲಯದ ಸಭಾಂಗಣದಲ್ಲಿ ಆಗಸ್ಟ್ 27 ರಂದು ಬೆಳಗ್ಗೆ 10.30 ಗಂಟೆಗೆ ಸರಳವಾಗಿ ಆಚರಿಸಲು ತೀರ್ಮಾನಿಸಲಾಯಿತು.

ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರೂಜಿ ಜಯಂತಿ ಕುರಿತು ಅಪರ ಜಿಲ್ಲಾಧಿಕಾರಿ ಬಿ.ಆರ್.ಪೂರ್ಣಿಮ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವ ಸಿದ್ದತಾ ಸಭೆಯಲ್ಲಿ ಮೇಲಿನಂತೆ ತೀರ್ಮಾನಿಸಲಾಯಿತು. ಸಭೆಯಲ್ಲಿ ಸಮುದಾಯದ ವಿವಿಧ ಮುಖಂಡರು ಹಾಜರಿದ್ದರು. (ಎನ್.ಬಿ)

Leave a Reply

comments

Related Articles

error: