ಕರ್ನಾಟಕಪ್ರಮುಖ ಸುದ್ದಿ

ಸಂತ್ರಸ್ತರಿಗೆ ಸರ್ಕಾರಿ ನೌಕರರ ಒಂದು ದಿನದ ವೇತನ ನೀಡಲು ಮನವಿ

ಹಾಸನ (ಆ.22): ಪ್ರಕೃತಿ ವಿಕೋಪದಿಂದ ಕೊಡಗು ಜಿಲ್ಲೆಯಲ್ಲಿ ಮಹಾಮಳೆಯಿಂದಾಗಿ ಸಾವು ನೋವುಗಳಾಗಿ ಆಸ್ತಿ ಪಾಸ್ತಿಯನ್ನು ಕಳೆದುಕೊಂಡು ತುಂಬಾ ಸಂಕಷ್ಟದಲ್ಲಿದ್ದಾರೆ, ಕೊಡಗಿನ ಜನರ ಕಷ್ಟದಲ್ಲಿ ರಾಜ್ಯ ಸರ್ಕಾರವು ಭಾಗಿಯಾಗಿ ಮೂಲಭೂತ ಸೌಕರ್ಯವನ್ನು ಒದಗಿಸುತ್ತಿದೆ.

ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಜೊತೆ ಕೈ ಜೊಡಿಸಿ ಕೊಡಗಿನ ಜನರ ಕಷ್ಟದಲ್ಲಿ ಭಾಗಿಯಾಗಲು ಸರ್ಕಾರಿ ನೌಕರರ ಒಂದು ದಿನದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲು ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಅದ್ದರಿಂದ ಹಾಸನ ಜಿಲ್ಲೆಯ ಸುಮಾರು 27000 ಸರ್ಕಾರಿ ನೌಕರರು ಸಹಕರಿಸುವಂತೆ ಹಾಸನ ಜಿಲ್ಲಾ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಎಂ. ಶ್ರೀನಿವಾಸ್ ಮನವಿ ಮಾಡಿದ್ದಾರೆ. (ಎನ್.ಬಿ)

Leave a Reply

comments

Related Articles

error: