
Uncategorized
ವರದಿಗಾರನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ
ರಾತ್ರಿ ಪಾಳಿ ಮುಗಿಸಿ ಮನೆಗೆ ತೆರಳುತ್ತಿದ್ದ ವಿಜಯವಾಣಿ ವರದಿಗಾರನ ಮೇಲೆ ದುಷ್ಕರ್ಮಿಗಳು ಬುಧವಾರ ರಾತ್ರಿ ಹಲ್ಲೆ ಮಾಡಿದ್ದಾರೆ.
ವಿಜಯವಾಣಿ ಪತ್ರಿಕೆ ಮೈಸೂರು ಆವೃತ್ತಿಯ ವರದಿಗಾರ ಶಿವಶಂಕರ್ ಹೆಬ್ಬಾಳು ಹಲ್ಲೆಗೊಳಗಾಗಿದ್ದು ಕೆ.ಆರ್.ಆಸ್ಪತ್ರೆಯಲ್ಲಿ ಹೊರ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಚನಹಳ್ಳಿ ಪಾಳ್ಯ ಬಳಿ ಈ ಘಟನೆ ನಡೆದಿದೆ. ಮೊಬೈಲ್ ಮತ್ತು ಹಣ ಕದಿಯಲು ಯತ್ನಿಸಿದ ದುಷ್ಕರ್ಮಿಗಳು ಕೊನೆಗೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಬ್ಯೂರೊ ಮುಖ್ಯಸ್ಥ ಸಿ.ಕೆ.ಮಹೇಂದ್ರ ಹೇಳಿದ್ದಾರೆ.