ಮೈಸೂರು

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯೊಳಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ದೋಚಿ ಪರಾರಿ

ಮೈಸೂರು,ಆ.24:- ಮೈಸೂರಿನಲ್ಲಿ ಮತ್ತೆ ಮನೆಯಲ್ಲಿ ಯಾರೂ ಇಲ್ಲದ ವೇಲೆ ಕಳ್ಳರು ಕೈಚಳಕ ತೋರುವ ಕೃತ್ಯ ಮುಂದುವರಿದಿದೆ. ಬಟ್ಟೆ ವ್ಯಾಪಾರಿಯೋರ್ವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯೊಳಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ.ಮೌಲ್ಯದ ಚಿನ್ನ-ಬೆಳ್ಳಿಯ ಆಭರಣ ಮತ್ತು ನಗದನ್ನು ದೋಚಿ ಪರಾರಿಯಾದ ಘಟನೆ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ.

ಹಳ್ಳದ ಕೇರಿ ನಿವಾಸಿ, ಬಟ್ಟೆ ವ್ಯಾಪಾರಿ ಅಶೋಕ್ ಕುಮಾರ್ ಎಂಬವರು ಬಟ್ಟೆ ಖರೀದಿಗೆ ಅಹ್ಮದಾಬಾದ್ ಗೆ ತೆರಳಿದ್ದರು. ಅವರ ಕುಟುಂಬಿಕರು ರಾಖಿ ಹಬ್ಬದ ಪ್ರಯುಕ್ತ ಬೆಂಗಳೂರಿಗೆ ತೆರಳಿದ್ದರು. ಇದೇ ಸಮಯ ನೋಡಿಕೊಂಡು ಮನೆಯ ಬಾಗಿಲು ಮೀಟಿ ಒಳನುಗ್ಗಿದ ಕಳ್ಳರು ಬೀರುವಿನಲ್ಲಿಟ್ಟ 390ಗ್ರಾಂ ಚಿನ್ನಾಭರಣ, 500ಗ್ರಾಂ ಬೆಳ್ಳಿಯ ಆಭರಣಗಳು ಮತ್ತು ಏಳು ಸಾವಿರ ರೂ.ನಗದನ್ನು ಕದ್ದೊಯ್ದಿದ್ದಾರೆ. ಬೀರುವಿನಿಂದ ಕಳ್ಳತನ ನಡೆಸುವಾಗ ಬಟ್ಟೆಗಳನ್ನೆಲ್ಲಾ ಚೆಲ್ಲಾಪಿಲ್ಲಿ ಗೊಳಿಸಿದ್ದಾರೆ. ಅಶೋಕ್ ಕುಮಾರ್ ಮನೆಗೆ ಬಂದ ವೇಳೆ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ಲಷ್ಕರ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ಇನ್ಸಪೆಕ್ಟರ್ ವಿವೇಕಾನಂದ ಮತ್ತು ಸಿಬ್ಬಂದಿಗಳು, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಲಷ್ಕರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: