ಮೈಸೂರು

ದಸಂಸ ರಾಜ್ಯ ಮಟ್ಟದ ಸಮಾವೇಶ ಡಿ.24ರಂದು

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣದ ಅಂಗವಾಗಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಬೌದ್ಧ ಸಮಾಜ ನಿರ್ಮಾಣದ ಸಂಕಲ್ಪ ರಾಜ್ಯಮಟ್ಟದ ಸಮಾವೇಶವನ್ನು ಡಿ.24ರಂದು ಮೈಸೂರಿನ ವೈದ್ಯಕೀಯ ಕಾಲೇಜು ಅಮೃತ ಮಹೋತ್ಸವ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸಂಚಾಲಕ ಬೆಲವೆತ್ತ ರಾಮಚಂದ್ರ ಅವರು ತಿಳಿಸಿದರು.

ಗುರುವಾರ ಜಲದರ್ಶಿನಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಅಂಬೇಡ್ಕರ್ ಭಾವಚಿತ್ರದ ಅನಾವರಣವನ್ನು ರಾಜ್ಯದ ಲೋಕೋಪಯೋಗಿ ಸಚಿವ ಹಾಗೂ ಮೈಸೂರಿನ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಆರ್. ಧ್ರುವನಾರಾಯಣ್, ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ, ಹುಣಸೂರು ಶಾಸಕ ಎಚ್‍.ಪಿ. ಮಂಜುನಾಥ್, ವಿಧಾನ ಪರಿಷತ್ ಆರ್. ಧರ್ಮಸೇನಾ, ಜಿಲ್ಲಾಧಿಕಾರಿ ಡಿ. ರಂದೀಪ್, ಮೆಡಿಕಲ್ ಕಾಲೇಜು ನಿರ್ದೇಶಕ ಮತ್ತು ಡೀನ್ ಕೃಷ್ಣಮೂರ್ತಿ ಮೊದಲಾದವರು ಭಾಗವಹಿಸಲಿದ್ದಾರೆ.

ಸಮಾವೇಶದ ದಿವ್ಯ ಸಾನಿಧ್ಯವನ್ನು ಕೊಳ್ಳೇಗಾಲ ಚೇತವನ ಬೌದ್ಧ ವಿಹಾರದ ಮನೋರಖ್ಖಿತ ಭಂತೇಜಿ ಹಾಗೂ ಜ್ಞಾನಪ್ರಕಾಶ್ ಸ್ವಾಮೀಜಿ ವಹಿಸಲಿದ್ದು, ದಸಂಸ ರಾಜ್ಯ ಸಂಚಾಲಕ ಲಕ್ಷ್ಮೀ ನಾರಾಯಣ ನಾಗವಾರ ಅಧ್ಯಕ್ಷತೆ ವಹಿಸಲಿದ್ದಾರೆ.

ಗೋಷ್ಠಿಯಲ್ಲಿ ದಸಂಸ ಜಿಲ್ಲಾ ಸಂಚಾಲಕ ಚೊಕ್ಕಳ್ಳಿ ಮಹದೇವಸ್ವಾಮಿ, ವಿಭಾಗೀಯ ಸಂಚಾಲಕ ದೇವಗಳ್ಳಿ ಸೋಮಶೇಖರ್, ಖಜಾಂಚಿ ಆಲಗೋಡು ಶಿವಣ್ಣ ಉಪಸ್ಥಿತರಿದ್ದರು.

Leave a Reply

comments

Related Articles

error: