ಪ್ರಮುಖ ಸುದ್ದಿ

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಯಿಗೆ ನೋಟುಗಳ ಶೃಂಗಾರ

ರಾಜ್ಯ(ಮಂಡ್ಯ)ಆ.24:- ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಶ್ರೀರಂಗಪಟ್ಟಣದ ಚಾಮುಂಡೇಶ್ವರಿ ಬೀದಿಯಲ್ಲಿನ ಶ್ರೀಚಾಮುಂಡೇಶ್ವರಿ ತಾಯಿಗೆ ನೋಟುಗಳಿಂದ ಸಿಂಗರಿಸಿ ವಿಶೇಷ ಪೂಜೆ ನೆರವೇರಿಸಲಾಯಿತು.

ಅರ್ಚಕ ಲಕ್ಷ್ಮೀಶ್  ಭಕ್ತರು ಸಿಂಗಾರಕ್ಕೆಂದು ನೀಡಲಾಗಿದ್ದ 5 ಲಕ್ಷ ರೂ.ಗಳನ್ನು ಬಗೆ ಬಗೆಯಾಗಿ ಅಲಂಕರಿಸಿ ವಿಶೇಷ ರೀತಿಯಲ್ಲಿ ದೇವಿಯನ್ನು ಆರಾಧಿಸಿದರು.  2000, 500, 200, 100, 50, 20, 10 ಹಾಗೂ 5 ರೂಗಳ ನೋಟುಗಳ ಸಿಂಗಾರ ಭಕ್ತರ ಮನ ಪುಳಕಗೊಳ್ಳುವಂತೆ ಮಾಡಿತು. ಭಕ್ತರು ಈ ಅಪರೂಪದ ಚಿತ್ರಣವನ್ನು ಕಣ್ತುಂಬಿಕೊಳ್ಳುವ ಜೊತೆಗೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: