ಮೈಸೂರು

ವಿಶ್ವಕವಿ ಕುವೆಂಪು – ಒಂದು ನೆನಪು ಹಾಗೂ ರಾಜ್ಯಮಟ್ಟ ಆದರ್ಶ ಶಿಕ್ಷಕ-ಶಿಕ್ಷಕಿ ಪ್ರಶಸ್ತಿ ಪ್ರದಾನ ಡಿ.25 ರಂದು

‘ವಿಶ್ವಕವಿ ಕುವೆಂಪು’ – ಒಂದು ನೆನಪು ಹಾಗೂ ರಾಜ್ಯಮಟ್ಟ ಆದರ್ಶ ಶಿಕ್ಷಕ-ಶಿಕ್ಷಕಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕರ್ನಾಟಕ ಕಾವಲುಪಡೆಯಿಂದ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ಎಂ.ಮೋಹನ್‍ಕುಮಾರ್ ಗೌಡ ತಿಳಿಸಿದರು.

ಅವರು, ಗುರುವಾರ, ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಡಿ.25ರ ಭಾನುವಾರ ಬೆಳಿಗ್ಗೆ 10ಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿ.ವಿ.ಯ ಕಾವೇರಿ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಹಿರಿಯ ಸಾಹಿತಿ ಡಾ. ಸಿ.ಪಿ. ಕೃಷ್ಣಕುಮಾರ್ ಉದ್ಘಾಟಿಸುವರು. ಕೆ.ಓ.ಯು.ನ ಕುಲಪತಿ ಪ್ರೊ.ಡಿ.ಶಿವಲಿಂಗಯ್ಯ ಅಧ್ಯಕ್ಷತೆ ವಹಿಸುವರು, ಕವಯಿತ್ರಿ ಡಾ.ಲತಾರಾಜಶೇಖರ್, ದಕ್ಷಿಣ ಕನ್ನಡ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಂ.ಆರ್. ರವಿ ಹಾಗೂ ನಗರ ಪೊಲೀಸ್ ಆಯುಕ್ತ ಡಾ. ಎ. ಸುಬ್ರಮಣ್ಯೇಶ್ವರ ರಾವ್ ಇವರುಗಳು ಪ್ರಶಸ್ತಿ ಪ್ರದಾನ ಮಾಡುವರು ಎಂದರು.

ಚಾಮರಾಜನಗರ, ಮಂಡ್ಯ-ಮೈಸೂರು, ಕೋಲಾರ, ಚಿತ್ರದುರ್ಗ ಸೇರಿದಂತೆ ರಾಜ್ಯಾದ್ಯಂತ 85 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಪಠ್ಯ ಹಾಗೂ ಸಹಪಠ್ಯ ವಿಷಯಗಳಲ್ಲಿ ಸಮರ್ಥ ಶಿಕ್ಷಕರಾಗಿ ರಚನಾತ್ಮಕ ಹಾಗೂ ಕ್ರಿಯಾಶೀಲತೆಯಿಂದ ಕರ್ತವ್ಯ ನಿರ್ವಹಿಸುವುದರೊಂದಿಗೆ ಸಮಾಜಮುಖಿ ನಿಲುವಿನ ಮನೋಭಾವ ಬಿತ್ತುವ ಸ್ನಾತಕೋತ್ತರ ಶಿಕ್ಷಕರಿಂದ ಅಂಗನವಾಡಿವರೆಗೂ ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಾಂಸ್ಕೃತಿಕ ಘಟಕದ ಅಧ್ಯಕ್ಷ ಟಿ. ಸತೀಶ್ ಜವರೇಗೌಡ, ರಾಜ್ಯ ಉಪಾಧ್ಯಕ್ಷ ಟಿ. ರವಿಗೌಡ, ರಾಜ್ಯ ಕಾರ್ಯದರ್ಶಿ ರವೀಂದ್ರ ಟಿ. ಉಪಸ್ಥಿತರಿದ್ದರು.

Leave a Reply

comments

Related Articles

error: