ಪ್ರಮುಖ ಸುದ್ದಿ

ಶೋಷಿತ ಸಮುದಾಯದವರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಮುಂದಾಗಬೇಕು : ಸಚಿವ ಡಿ.ಕೆ.ಶಿವಕುಮಾರ್

ರಾಜ್ಯ(ಬೆಂಗಳೂರು)ಆ.27:- ಸರ್ಕಾರದ ಯೋಜನೆಗಳನ್ನು ಶೋಷಿತ ಸಮುದಾಯದವರು ಸದುಪಯೋಗ ಪಡಿಸಿಕೊಂಡು, ಸಾಮಾಜಿಕ ಹಾಗೂ ಆರ್ಥಿಕವಾಗಿ ಮುಂದಾಗಬೇಕು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಕರೆ ನೀಡಿದರು.

ನಗರದಲ್ಲಿ ರಾಜಾಜಿನಗರದ ರಾಮಮಂದಿರ ಆಟದ ಮೈದಾನದಲ್ಲಿ ಕರ್ನಾಟಕ ರಾಜ್ಯ ತಿಗಳರ ಸಾರ್ವಜನಿಕ ವಿದ್ಯಾಭಿವೃದ್ಧಿ ಸಂಘ ಆಯೋಜಿಸಿದ್ದ, ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಎಲ್ಲಾ ಸಮುದಾಯದ ಆರ್ಥಿಕ, ಸಾಮಾಜಿಕ ಪರಿಸ್ಥಿತಿ ನೋಡಿ, ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ.ಇದರ ಬಗ್ಗೆ ಮಾಹಿತಿ ಪಡೆದು, ಅಭಿವೃದ್ಧಿ ಆಗಬೇಕು.ಜೊತೆಗೆ, ಇನ್ನಿತರರಿಗೂ ಅರಿವು ಮೂಡಿಸುವಂತೆ ಆಗಬೇಕು ಎಂದು ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: