ಕರ್ನಾಟಕಪ್ರಮುಖ ಸುದ್ದಿ

ರಾಹುಲ್ ಗಾಂಧಿ ವಿರುದ್ಧ ವೈಯಕ್ತಿಕ ನಿಂದನೆ ನಿಲ್ಲಿಸಿ: ದಿನೇಶ್ ಗುಂಡೂರಾವ್

ಹುಬ್ಬಳ್ಳಿ (ಆ.27): ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಬಗ್ಗೆ ರಾಜಕೀಯ ವಿರೋಧಿಗಳು ವೈಯಕ್ತಿಕ ನಿಂದನೆ ಮಾಡುವುದನ್ನು ನಿಲ್ಲಿಸಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬಿಜೆಪಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳನ್ನು ನೀಡಿದೆ. ಹೀಗಾಗಿ ಈ ಭಾರಿ ಸ್ಥಳೀಯ ಚುನಾವಣೆಯಲ್ಲಿ ಗೆಲುವು ನಮ್ಮದೆ ಎಂದು ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೇಶದ ಆಸ್ತಿಯನ್ನು ಹಗಲು ದರೋಡೆ ಮಾಡುತ್ತಿರುವ ಕೇಂದ್ರ ಸರ್ಕಾರ,ಜನರ ನಂಬಿಕೆಯಂತೆ ಆಡಳಿತ ನೀಡುತ್ತಿಲ್ಲ. ಲೋಕಪಾಲ್ ಬಿಲ್ ಪಾಸ್ ಮಾಡದ ಪ್ರಧಾನಿ ಮೋದಿ ಮತ್ತು ಬಿಜೆಪಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಹಕ್ಕಿಲ್ಲ, ರಾಹುಲ್ ಗಾಂಧಿ ವಿರುದ್ಧ ವೈಕ್ತಿಕ ವಾಗ್ದಾಳಿ ನಿಲ್ಲಿಸಬೇಕು ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದರು. (ಎನ್.ಬಿ)

Leave a Reply

comments

Related Articles

error: