ಪ್ರಮುಖ ಸುದ್ದಿ

ಮಕ್ಕಳ ಕಳ್ಳನೆಂದು ಭಾವಿಸಿ ಯುವಕನಿಗೆ ಹಿಗ್ಗಾ ಮುಗ್ಗಾ ಥಳಿತ

ರಾಜ್ಯ(ಬೆಂಗಳೂರು)ಆ.27:- ಮಕ್ಕಳ ಕಳ್ಳ ಎಂದು ಭಾವಿಸಿ ಸಾರ್ವಜನಿಕರು ಯುವಕನೊಬ್ಬನನ್ನು ಹಿಡಿದು  ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೊಪ್ಪಿಸಿರುವ ಘಟನೆ ರಾಜ್ಯ ರಾಜಧಾನಿ  ಬೆಂಗಳೂರಿನಲ್ಲಿ ನಡೆದಿದೆ.

ನಗರದ ಹೆಣ್ಣೂರು ಸಮೀಪದ ಥಣಿಸಂದ್ರ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ.  ಯುವಕನು ಬಾಲಕನೊಬ್ಬನನ್ನು ಕದ್ದೊಯ್ದಿದ್ದಾನೆಂದು  ಅನುಮಾನ ವ್ಯಕ್ತಪಡಿಸಿ ಯುವಕನನ್ನು ಹಿಡಿದು ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಯುವಕನನ್ನು ಸ್ಥಳೀಯರು ಪೊಲೀಸರ ವಶಕ್ಕೆ ನೀಡಿದ್ದಾರೆ. ಘಟನೆ  ಕುರಿತು ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: