ಮೈಸೂರು

ಮೈಸೂರಿಗೆ ಬಂದಿಳಿದ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು 

ಮೈಸೂರು,ಆ.27:- ಮೈಸೂರಿನಲ್ಲಿ ನಡೆಯಲಿರುವ ಸುತ್ತೂರು ಮಠದ ಕಾರ್ಯಕ್ರಮಕ್ಕೆ ಭಾಗವಹಿಸಲು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು  ಇಂದು ಸಂಜೆ ಮೈಸೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿಟಿ ದೇವೇಗೌಡ. ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಹಾಗೂ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಯೀಮಾ ಸುಲ್ತಾನಾ ನಜೀರ್ ಅಹ್ಮದ್, ಜಿಲ್ಲೆಯ ಹಿರಿಯ ಅಧಿಕಾರಿಗಳು ಹೂ.ಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: