ಕರ್ನಾಟಕಪ್ರಮುಖ ಸುದ್ದಿ

ಮದ್ಯ ಮಾರಾಟ ನಿಷೇಧ

ರಾಜ್ಯ(ಮಂಡ್ಯ)ಆ.28:- ಮಂಡ್ಯ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆಯ ಸಂಬಂಧ ಮಂಡ್ಯ ನಗರಸಭೆ, ಮದ್ದೂರು, ಪಾಂಡವಪುರ, ನಾಗಮಂಗಲ ಪುರಸಭೆ ಹಾಗೂ ಬೆಳ್ಳೂರು ಪಟ್ಟಣ ಪಂಚಾಯಿತಿಯ ವ್ಯಾಪ್ತಿಯ ಪ್ರದೇಶಗಳಲ್ಲಿ 29-8-2018 ರಂದು ಬೆಳಿಗ್ಗೆ 7 ಗಂಟೆಯಿಂದ 31-8-2018 ರ ಸಂಜೆ 6 ಗಂಟೆಯವರೆಗೆ ಮತ್ತು ಮತ ಎಣಿಕೆ ನಡೆಯುವ 3-9-2018 ರ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ವಿಧದ ಮದ್ಯದಂಗಡಿಗಳನ್ನು, ಬಾರ್, ರೆಸ್ಟೋರೆಂಟ್ ಮತ್ತು ಕ್ಲಬ್‍ಗಳಲ್ಲಿ ಮದ್ಯ ಮಾರಾಟ, ಸಾಗಾಣಿಕೆ, ಶೇಖರಣೆಯನ್ನು ನಿಷೇಧಿಸಿ ಒಣ ದಿವಸಗಳೆಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರು ಘೋಷಿಸಿ ಆದೇಶಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: