ಕರ್ನಾಟಕಪ್ರಮುಖ ಸುದ್ದಿ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ತಿರುಪತಿಗೆ ನೇರ ಫ್ಲೈ ಬಸ್ ಆರಂಭ

ಬೆಂಗಳೂರು (ಆ.28): ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೆಎಸ್‌ಆರ್‌ಟಿಸಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತಿರುಪತಿಗೆ ನೇರ ಫ್ಲೈ ಬಸ್ ಸೇವೆಯನ್ನು ಆರಂಭಿಸಿದೆ. ಟಿಕೆಟ್ ದರವನ್ನು 800 ರೂ. ನಿಗದಿ ಮಾಡಲಾಗಿದೆ.

ಸೋಮವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಫ್ಲೈ ಬಸ್ ಸೇವೆಗೆ ಚಾಲನೆ ನೀಡಿದರು. ವಿಮಾನ ನಿಲ್ದಾಣದಿಂದ ಮೆಜೆಸ್ಟಿಕ್‌ಗೆ ಆಗಮಿಸದೇ ಬಸ್ ನೇರವಾಗಿ ತಿರುಪತಿಗೆ ತೆರಳಲಿದೆ. ಪ್ರತಿದಿನ ಬೆಳಗ್ಗೆ 10 ಗಂಟೆಗೆ ಫ್ಲೈ ಬಸ್ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡಲಿದೆ. ತಿರುಪತಿಯಿಂದ ಬೆಳಗ್ಗೆ 11 ಗಂಟೆ ಮತ್ತು ರಾತ್ರಿ 9 ಗಂಟೆಗೆ ಹೊರಡಲಿದೆ.

2013ರಲ್ಲಿ ಕೆಎಸ್‌ಆರ್‌ಟಿಸಿ ಬೆಂಗಳೂರು ವಿಮಾನ ನಿಲ್ದಾಣದಿಂದ ಮೈಸೂರಿಗೆ ಮೊದಲ ಬಾರಿಗೆ ಫ್ಲೈ ಬಸ್ ಸೇವೆ ಆರಂಭಿಸಿತ್ತು. ಈ ಬಸ್ ಸೇವೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಈಗ ಮೈಸೂರಿಗೆ ಎರಡು ಬಸ್‌ಗಳು ಸಂಚಾರ ನಡೆಸುತ್ತಿವೆ. ಫ್ಲೈ ಬಸ್ ಸೇವೆಗೆ ಸಿಕ್ಕ ಪ್ರತಿಕ್ರಿಯೆ ನೋಡಿದ ಕೆಎಸ್‌ಆರ್‌ಟಿಸಿ ವಿವಿಧ ನಗರಗಳಿಗೆ ಬಸ್ ಸೇವೆಯನ್ನು ಆರಂಭಿಸಿತು. ಮಡಿಕೇರಿ, ಮಂಗಳೂರು, ಕಲ್ಲಿಕೋಟೆ, ಸೇಲಂ ಮುಂತಾದ ನಗರಗಳಿಗೆ ಫ್ಲೈ ಬಸ್ ಸೇವೆಯನ್ನು ಈಗ ನೀಡಲಾಗುತ್ತಿದೆ ಎಂಬುದು ಗಮನಾರ್ಹ. (ಎನ್.ಬಿ)

Leave a Reply

comments

Related Articles

error: