ಪ್ರಮುಖ ಸುದ್ದಿ

ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಲಂಡನ್ ಗೆ ತೆರಳುವ ಕನಸಿಗೆ ಹೈಕೋರ್ಟ್ ಬ್ರೇಕ್

ರಾಜ್ಯ(ಬೆಂಗಳೂರು)ಆ.28:- ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಲಂಡನ್ ಗೆ ತೆರಳಲುವ ಕನಸಿಗೆ ಸೋಮವಾರ ಹೈಕೋರ್ಟ್ ಬ್ರೇಕ್ ಹಾಕಿದೆ.

ವಿದ್ವತ್ ಮೇಲೆ ನಡೆದ ಹಲ್ಲೆ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ನಲಪಾಡ್​ ಲಂಡನ್ನಿನಲ್ಲಿರುವ ತನ್ನ ಸಹೋದರನನ್ನು ಭೇಟಿ ಮಾಡಲು ಅವಕಾಶ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ನಿನ್ನೆ ಆ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ 15 ದಿನಗಳ ವಿದೇಶ ಪ್ರವಾಸಕ್ಕೆ ಅವಕಾಶ ನೀಡಲು ನಿರಾಕರಿಸಿದೆ. ಅಲ್ಲದೆ, ಲಂಡನ್​ಗೆ ಹೋಗಬೇಕು ಎನ್ನುವುದಾದರೆ ಸೆಷನ್ಸ್ ನ್ಯಾಯಾಲಯದಲ್ಲೇ ಅನುಮತಿ ಕೇಳುವಂತೆ ಹೈಕೋರ್ಟ್​ನ ಏಕಸದಸ್ಯ ಪೀಠ ಸೂಚನೆ ನೀಡಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: