ಪ್ರಮುಖ ಸುದ್ದಿ

ಮೈತ್ರಿ ಸರ್ಕಾರವನ್ನು ಉರುಳಿಸಲು ಯಾರೂ ಷಡ್ಯಂತ್ರ ಮಾಡಿಲ್ಲ : ಸಚಿವ ಜಮೀರ್ ಅಹ್ಮದ್ ಖಾನ್

ರಾಜ್ಯ(ಹುಬ್ಬಳ್ಳಿ)ಆ.28:- ಮೈತ್ರಿ ಸರ್ಕಾರವನ್ನು ಉರುಳಿಸಲು ಯಾರೂ ಷಡ್ಯಂತ್ರ ಮಾಡಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಜಮೀರ್ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಗೊಂದಲವನ್ನುಂಟು ಮಾಡಿದೆ. ಆದರೆ ಅವರು ಕುಮಾರಸ್ವಾಮಿ ಸರ್ಕಾರವನ್ನು ಉರುಳಿಸಿ ಸಿಎಂ ಆಗ್ತೇನೆ ಎಂದಿಲ್ಲ. ಮುಂದಿನ ಚುನಾವಣೆಯಲ್ಲಿ ಗೆದ್ದು ಸಿಎಂ ಆಗ್ತೇನೆ ಎಂದಿದ್ದಾರೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.

ಸಿದ್ದರಾಮಯ್ಯ ನಮ್ಮ ನಾಯಕರು. ಯುರೋಪ್ ಪ್ರವಾಸ ಪೂರ್ವ ನಿಗದಿಯಾಗಿದೆ. ಸಚಿವರು ಸಿದ್ದರಾಮಯ್ಯ ಜತೆ ಹೋಗುವ ವಿಚಾರಕ್ಕೆ ಪ್ರತಿಕ್ರಿಯಿಸಿ ನನ್ನನ್ನು ಕರೆದಿದ್ದರೇ ನಾನು ಹೋಗುತ್ತಿದ್ದೆ ಎಂದು ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: