ಕರ್ನಾಟಕಪ್ರಮುಖ ಸುದ್ದಿ

ಇನ್ನೊಂದು ತಿಂಗಳಲ್ಲಿ ಕುಮಾರಸ್ವಾಮಿ ಸರ್ಕಾರ ಪತನ: ಕೇಂದ್ರ ಸಚಿವ ಸದಾನಂದಗೌಡ ಭವಿಷ್ಯ

ಮಂಗಳೂರು (ಆ.28): ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಇನ್ನೊಂದು ತಿಂಗಳಲ್ಲಿ ಪತನವಾಗಲಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಭವಿಷ್ಯ ನುಡಿದಿದ್ದಾರೆ.

ಮಂಗಳೂರಿನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಹೆಚ್ಚು ದಿನ ಉಳಿಯಲ್ಲ ಅನ್ನೋದು ನೂರಕ್ಕೆ ನೂರು ಸತ್ಯ. ಬಿಜೆಪಿ ಯಾವುದೇ ಹಂತದಲ್ಲಿ ಸರ್ಕಾರವನ್ನು ಬೀಳಿಸಲು ಹೋಗುವುದಿಲ್ಲ. ನಮಗೆ ಬೇರೆಯವರು ಬೆಂಬಲ ಕೊಡಲು ಬಂದಾಗಷ್ಟೇ ನಾವು ಮುಂದುವರೆಯುತ್ತವೆ ಎಂದು ಹೇಳಿದರು.

ಕಾಂಗ್ರೆಸ್ ಶಾಸಕರ ಅಪಸ್ವರ ಕುರಿತು ಪ್ರತಿಕ್ರಿಯೆ ನೀಡಿದ ಸದಾನಂದಗೌಡರು, ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಸಿಎಂ ಕುರ್ಚಿಯಿಂದ ಕೆಳಗಿಸುವುದೇ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಗುರಿ. ಸಿದ್ದರಾಮಯ್ಯ ಅವರ ದ್ವೇಷ ಶಮನ ಮಾಡಲು ಸಾಧ್ಯವೇ ಇಲ್ಲ. ಒಂದು ವೇಳೆ  ಹಾಗಾಗಬೇಕಾದರೆ ಕುಮಾರಸ್ವಾಮಿ ಅಧಿಕಾರದಿಂದ ಇಳಿಯಬೇಕು ಎಂದು ನುಡಿದರು. (ಎನ್.ಬಿ)

Leave a Reply

comments

Related Articles

error: